ಶುಕ್ರವಾರ – ದ.ಕ 376 ಹಾಗೂ ರಾಜ್ಯದಲ್ಲಿ 10913 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಶುಕ್ರವಾರ) ದ.ಕ ಜಿಲ್ಲೆಯಲ್ಲಿ 376 ಹಾಗೂ ರಾಜ್ಯದಲ್ಲಿ 10913 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು 376 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25948 ಕ್ಕೆ ಏರಿಕೆಯಾಗಿದೆ. ಇಂದು 2 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 596 ಮಂದಿ ಬಲಿಯಾಗಿದ್ದಾರೆ.ಇಂದು 268 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಇಂದು 10913 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 690269 ಆಗಿದೆ. ಒಟ್ಟು 11,88,51 ಸಕ್ರಿಯ ಪ್ರಕರಣಗಳಿವೆ.ಇಂದು ಕೋವಿಡ್-19 ಸೋಂಕಿನಿಂದ 114 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 9789 ಆಗಿದೆ. ಇಂದು 9091 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವವರ ಒಟ್ಟು ಸಂಖ್ಯೆ 5,61,610 ಆಗಿದೆ.