ಸುದ್ದಿ

ಸ್ಯಾಂಡಲ್‌ವುಡ್‌ ಡ್ರಗ್ಸ್‌ ದಂಧೆ – ನಟಿ ರಾಗಿಣಿ ಸಿಸಿಬಿ ವಶಕ್ಕೆ…

ಬೆಂಗಳೂರು: ಸ್ಯಾಂಡಲ್ ವುಡ್‌ಗೆ ಡ್ರಗ್ಸ್ ನಂಟು ಆರೋಪಕ್ಕೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳ್ಳಗೆ ನಟಿ ರಾಗಿಣಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 3 ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಿದ್ದು ಬಳಿಕ ರಾಗಿಣಿ ಅವರ ಮೊಬೈಲ್‌‌, ಕಾರು ಕೀ, ಮನೆ ಕೀ ಹಾಗೂ ರಾಗಿಣಿ ಅವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.

ಡ್ರಗ್ಸ್​ ಮಾಫಿಯಾ ಸಂಬಂಧ ರಾಗಿಣಿ ಸ್ನೇಹಿತ ರವಿಶಂಕರ್​ನನ್ನು ಬುಧವಾರ ಬಂಧಿಸಿದ್ದ ಪೊಲೀಸರು ಆತನನ್ನು ಸಾಕಷ್ಟು ವಿಚಾರಣೆ ಮಾಡಿದ್ದರು. ವಿಚಾರಣೆ ವೇಳೆ ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದ ಸಿಸಿಬಿ ಪೊಲೀಸರು, ಇಂದು ಬೆಳಿಗ್ಗೆ ಯಲಹಂಕದ ಜ್ಯುಡಿಷಿನಲ್‌ ಲೇಔಟ್​ನಲ್ಲಿರುವ ರಾಗಿಣಿಯವರ ಅಪಾರ್ಟ್ಮೆಂಟ್​ಗೆ ಸರ್ಚ್​​ ವಾರೆಂಟ್​ನೊಂದಿಗೆ ತೆರಳಿ ಶೋಧಕಾರ್ಯ ನಡೆಸಿದ್ದರು.

Related Articles

Leave a Reply

Your email address will not be published.

Back to top button