ಸೋಮವಾರ – ದ.ಕ 413 ಹಾಗೂ ರಾಜ್ಯದಲ್ಲಿ 8865 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಸೋಮವಾರ ) ದ.ಕ ಜಿಲ್ಲೆಯಲ್ಲಿ 413 ಹಾಗೂ ರಾಜ್ಯದಲ್ಲಿ 8865 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 413 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 17776 ಕ್ಕೆ ಏರಿಕೆಯಾಗಿದೆ. ಇಂದು 5 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 447 ಮಂದಿ ಬಲಿಯಾಗಿದ್ದಾರೆ.ಇಂದು 297 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 4045 ಸಕ್ರಿಯ ಪ್ರಕರಣಗಳಿವೆ. 413 ಪ್ರಕರಣಗಳ ಪೈಕಿ 169 ಪ್ರಕರಣಗಳು ಮಂಗಳೂರಿನಿಂದ, 65 ಪ್ರಕರಣಗಳು ಬಂಟ್ವಾಳದಿಂದ, 66 ಪ್ರಕರಣಗಳು ಪುತ್ತೂರಿನಿಂದ, 43 ಪ್ರಕರಣಗಳು ಸುಳ್ಯದಿಂದ , 47 ಪ್ರಕರಣಗಳು ಬೆಳ್ತಂಗಡಿಯಿಂದ ಹಾಗೂ 23 ಪ್ರಕರಣಗಳು ಬೇರೆ ಜಿಲ್ಲೆಯವರದ್ದಾಗಿದೆ.

ಇನ್ನು ರಾಜ್ಯದಲ್ಲಿ ಇಂದು 8,244 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. 119 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,67,689ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,384ಕ್ಕೆ ಏರಿಕೆಯಾಗಿದೆ. ಇಂದು 8,865 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,61,823ಕ್ಕೆ ಏರಿಕೆಯಾಗಿದೆ. 98,463 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 795 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಇಂದು 56 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

Sponsors

Related Articles

Leave a Reply

Your email address will not be published. Required fields are marked *

Back to top button