ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಪಕ್ಷದ ಹಿರಿಯ ಕಾರ್ಯಕರ್ತೆ ಆಶಾ ತಿಮ್ಮಪ್ಪ ಗೌಡ…

ಪುತ್ತೂರು: ದ.ಕ.ಜಿ.ಪಂ.ಮಾಜಿ ಅಧ್ಯಕ್ಷೆ, ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಕುಂತೂರು ಗ್ರಾಮದ ಆಶಾ ತಿಮ್ಮಪ್ಪ ಗೌಡ ಕುಂಡಡ್ಕದ ನಿವಾಸಿಯಾಗಿರುತ್ತಾರೆ.
ಪದವು ನಿವಾಸಿ ತಿಮ್ಮಪ್ಪ ಗೌಡ ಅವರ ಪತ್ನಿ 65ರ ಹರೆಯದ ಆಶಾರವರು ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತೆ. ಎಸ್ ಎಸ್ ಎಲ್ ಸಿ ವಿದ್ಯಾಭ್ಯಾಸ ಹೊಂದಿದ್ದಾರೆ. ಇವರು ನೆಲ್ಯಾಡಿ ಹಾಗೂ ಬೆಳ್ಳಾರೆಯಿಂದ ಜಿ. ಪಂ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇವರು ಜಿಲ್ಲಾ ಪಂಚಾಯತ್ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ವಿಶೇಷ ಎಂದರೇ ಇವರು ಕುಂತೂರು ಗ್ರಾಮದಿಂದ ಬಿಜೆಪಿಯಿಂದ ಎಂಎಲ್ ಎ ಚುನಾವಣೆ ಸ್ಪರ್ಧಿಸುತ್ತಿರುವ ಎರಡನೇ ಅಭ್ಯರ್ಥಿ. ಈ ಹಿಂದೆ ಶಕುಂತಳಾ ಟಿ ಶೆಟ್ಟಿ ಬಿಜೆಪಿಯಿಂದ ಬಂಟ್ವಾಳ ಹಾಗೂ ಪುತ್ತೂರಿನಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಒಟ್ಟಿನಲ್ಲಿ ಒಬ್ಬ ನಿಷ್ಠಾವಂತ ಪಕ್ಷದ ಕಾರ್ಯಕರ್ತೆ ಹಾಗೂ ಸಮಾನ್ಯ ಕುಟುಂಬದ ಮಹಿಳೆಗೆ ಬಿಜೆಪಿ ಟಿಕೆಟ್ ನೀಡಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ ಎನ್ನಲಾಗಿದೆ.

Sponsors

Related Articles

Back to top button