ಆ.28 – ಬಿ ಸಿ ರೋಡ್ ಲಯನ್ಸ್ ಸೇವಾ ಮಂದಿರದಲ್ಲಿ ಐಪಿಎಸ್, ಐಎಎಸ್, ಕೆಎಎಸ್ ಪರೀಕ್ಷೆ ಬಗ್ಗೆ ಮಾಹಿತಿ ಕಾರ್ಯಾಗಾರ…

ಬಂಟ್ವಾಳ : ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರಸ್ತುತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿದರೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಲು ಸಾಧ್ಯ. ಆ ನಿಟ್ಟಿನಲ್ಲಿ ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಇರುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಸೆಟ್, ನೀಟ್, ಜೆಇಇ, ಕೆವಿಪಿವೈ ಹಾಗೂ ಇತರ ಪರೀಕ್ಷೆಗಳಾದ ಎನ್‌ಟಿಎಸ್‌ಇ ಜೊತೆಗೆ ಐಪಿಎಸ್, ಐಎಎಸ್, ಕೆಎಎಸ್ ಪರೀಕ್ಷೆಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಲಯನ್ಸ್ ಕ್ಲಬ್ ಬಂಟ್ವಾಳ, ಲಿಯೋ ಕ್ಲಬ್ ಬಂಟ್ವಾಳ ಗೋಲ್ಡ್ ಹಾಗೂ ಯುನಿಕ್ ಎಜುಕೇರ್ ಬಿ.ಸಿ.ರೋಡು ಇದರ ಜಂಟಿ ಆಶ್ರಯದಲ್ಲಿ ಆಗಸ್ಟ್ 28 ರಂದು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಾಗಾರದಲ್ಲಿ ಗಣಿತಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಕವಿತಾ, ರಾಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಹರ್ಷಿತಾ ಮತ್ತು ಸಂಶೋಧಕರಾಗಿರುವ ಚೇತನ್ ಮುಂಡಾಜೆಯವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಲಿದ್ದಾರೆ.
ಕಾರ್ಯಕ್ರಮವನ್ನು ಬಂಟ್ವಾಳ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಉಮೇಶ್ ಆಚಾರ್ಯ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಲಿಯೋ ಅಧ್ಯಕ್ಷೆ ಭುವಿ ಕಾರಂತ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಲಿಯೋ ಕೋರ್ಡಿನೇಟರ್ ಪ್ರೀತಮ್ ಪೊನ್ನಪ್ಪ ಎನ್. ಜಿ., ಜಿಲ್ಲಾ ಲಿಯೋ ಅಧ್ಯಕ್ಷ ಕವನ ಕುಬೆವೂರು, ಜಿಲ್ಲಾ ಲಿಯೋ ಎಡ್ವೈಸರ್ ಡಾ| ದಿವ್ಯ ವಿ. ಶೆಟ್ಟಿ ಭಾಗವಹಿಸಲಿದ್ದಾರೆ.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಈ ಕಾರ್ಯಾಗಾರದ ಪ್ರಯೋಜನವಾಗಲಿದ್ದು, ಕಾರ್ಯಾಗಾರಕ್ಕೆ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ. ಬೆಳಿಗ್ಗೆ 9 ಗಂಟೆಗೆ ಉದ್ಘಾಟನೆಗೊಂಡು ಮಧ್ಯಾಹ್ನ 1 ಗಂಟೆಯವರೆಗೆ ಕಾರ್ಯಾಗಾರ ನಡೆಯಲಿದ್ದು, ಉಟೋಪಚಾರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳುವುದು. ಭಾಗವಹಿಸಲಿಚ್ಚಿಸುವವರು ಲಯನ್ ಲಕ್ಷ್ಮಣ್ ಅಗ್ರಬೈಲು (ದೂ: 9535673976)ಗೆ ಅಗಸ್ಟ್ 26 ರೊಳಗೆ ತಮ್ಮ ಹೆಸರು ನೋಂದಾಯಿಸಬೇಕು ಎಂದು ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sponsors

Related Articles

Back to top button