ಪೆಟ್ರೋಲ್ ದರ ಮತ್ತೆ 36 ಪೈಸೆ ಏರಿಕೆ…

ನವದೆಹಲಿ: ಇಂದು ಮತ್ತೆ ಪೆಟ್ರೋಲ್ ದರ36 ಪೈಸೆ ಏರಿಕೆಯಾಗಿದೆ. ಇದರಿಂದ 2 ತಿಂಗಳಲ್ಲಿ ಪೆಟ್ರೋಲ್ ಬೆಲೆ 35 ಬಾರಿ ಏರಿಕೆಯಾದಂತಾಗಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 36 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ ದರವನ್ನು ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.ಹೊಸ ದರದೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್’ಗೆ ರೂ.99.92ಗೆ ಏರಿಕೆಯಾಗಿದ್ದರೆ, ಬೆಂಗಳೂರಿನಲ್ಲಿ ರೂ.103.26ಕ್ಕೆ ತಲುಪಿದೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105.97ಕ್ಕೆ ಏರಿಕೆಯಾಗಿದ್ದು, ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.9ಕ್ಕೆ ಏರಿಕೆಯಾಗಿದೆ. ಇನ್ನು ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 100.8ಕ್ಕೆ ತಲುಪಿದೆ.

Related Articles

Back to top button