ಕೇಂದ್ರ ಸರ್ಕಾರದ ಕೃಷಿ ಮಸೂದೆಗಳ ತಿದ್ದುಪಡಿಗಳ ಬಗ್ಗೆ ಅರಿವು ಮತ್ತು ಅವಲೋಕನ ಕಾರ್ಯಕ್ರಮ…

ಪುತ್ತೂರು: ಕೇಂದ್ರ ಸರ್ಕಾರದ ಕೃಷಿ ಮಸೂದೆಗಳ ತಿದ್ದುಪಡಿಗಳ ಬಗ್ಗೆ ರೈತ ಸಮುದಾಯಕ್ಕೆ ಮಾಹಿತಿ ನೀಡುವ ಸಲುವಾಗಿ ಅರಿವು ಮತ್ತು ಅವಲೋಕನ ಕಾರ್ಯಕ್ರಮವನ್ನು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ಏರ್ಪಡಿಸಲಾಗಿದೆ.
ಕಾಲೇಜಿನ ಸಮಾಜಮುಖೀ ಧ್ಯೇಯಗಳಿಗೆ ಅನುಗುಣವಾಗಿ ಸೆ. 26 ರಂದು ಬೆಳಿಗ್ಗೆ 9.30ಕ್ಕೆ ಈ ಕಾರ್ಯಕ್ರಮವು ನಡೆಯಲಿದ್ದು, ಕೃಷಿ ಅರ್ಥಶಾಸ್ತ್ರಜ್ಞ ಹಾಗೂ ಸಾಮಾಜಿಕ ಮುಂದಾಳು ವಿಶ್ವೇಶ್ವರ ಭಟ್ ಬಂಗಾರಡ್ಕ ಇವರು ಮಸೂದೆಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ. ವಿವೇಕಾನಂದ ಮಹಾವಿದ್ಯಾಲಯದ ಉಪನ್ಯಾಸಕ ಮತ್ತು ಪರಿಸರ ತಜ್ಞ ಡಾ.ಶ್ರೀಶ ಕುಮಾರ್ ಅವಲೋಕನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಪ್ರಸ್ತಾವನೆಯನ್ನು ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್.ಪಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಕೋವಿಡ್-19ರ ಸರ್ಕಾರದ ಮಾರ್ಗಸೂಚಿಗಳನ್ವಯ ಸೀಮಿತ ಕೃಷಿಕ ಬಂಧುಗಳ ಪಾಲ್ಗೊಳ್ಳುವಿಕೆಯಲ್ಲಿ ಈ ಕಾರ್ಯಕ್ರಮವು ನಡೆಯಲಿದೆ. ಕೃಷಿ ಮಸೂದೆಯ ತಿದ್ದುಪಡಿಗಳ ಬಗ್ಗೆ ರೈತರಿಗೆ ಸಂದೇಹಗಳಿದ್ದರೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಉತ್ತರವನ್ನು ಕಂಡುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ-9743703473 ನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button