ಬಂಟ್ವಾಳ ಎಪಿಎಂಸಿ – ಅಧ್ಯಕ್ಷರಾಗಿ ನೇಮಿರಾಜ ರೈ ಆಯ್ಕೆ…
ಬಂಟ್ವಾಳ: ಬಂಟ್ವಾಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಧ್ಯಕ್ಷರಾಗಿ ನೇಮಿರಾಜ ರೈ ಹಾಗೂ ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು (ಗುರುವಾರ) ಬಂಟ್ವಾಳ ಎಪಿಎಂಸಿ ಕಚೇರಿಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದಿದ್ದು, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.ಅವರು ಚುನಾವಣಾಧಿಕಾರಿಯಾಗಿದ್ದರು.
ಅಧ್ಯಕ್ಷರಾಗಿ ಆಯ್ಕೆಗೊಂಡ ನೇಮಿರಾಜ ರೈ ಅವರು ಮಾಣಿ ಕ್ಷೇತ್ರದಿಂದ ಹಾಗೂ ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಅವರು ತುಂಬೆ ಕ್ಷೇತ್ರದಿಂದ ನಿರ್ದೇಶಕರಾಗಿ ಚುನಾಯಿತರಾಗಿದ್ದರು. ಇಬ್ಬರು ಕೂಡ ಬಿಜೆಪಿ ಬೆಂಬಲಿತರಾಗಿದ್ದಾರೆ.