ಭಾರತ್ ಜೋಡೋ ಯಾತ್ರೆಯ ಕೆ.ಪಿ.ಸಿ.ಸಿ. ಕೋ- ಆರ್ಡಿನೇಟರ್ ಆಗಿ ಟಿ.ಎಂ.ಶಾಹೀದ್ ತೆಕ್ಕಿಲ್ ನೇಮಕ…
ಸುಳ್ಯ: ಕರ್ನಾಟಕದಲ್ಲಿ ಒಕ್ಟೋಬರ್ 1 ರಿಂದ 22 ರವರೆಗೆ ಸಾಗುವ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಗೆ ಕೆ.ಪಿ.ಸಿ.ಸಿಯ ಕೋ- ಆರ್ಡಿನೇಟರ್ ಆಗಿ ಕಾಂಗ್ರೇಸ್ ಮುಖಂಡ ಟಿ.ಎಂ ಶಾಹೀದ್ ತೆಕ್ಕಿಲ್ ಅವರು ಎ.ಐ.ಸಿ.ಸಿ ಯಿಂದ ನೇಮಕಗೊಂಡಿರುತ್ತಾರೆ.
ಯಾತ್ರೆ ಉದ್ದಕ್ಕೂ ಪಾದಯಾತ್ರೆ, ಮೆರವಣಿಗೆ, ಸಭೆ ಸಮಾರಂಭಗಳನ್ನು ಹಾಗೂ ಎಲ್ಲಾ ಕಾರ್ಯಕ್ರಮಗಳನ್ನೂ ಸಂಘಟಿಸುವಲ್ಲಿ ಅವರು ಸಹಕರಿಸಬೇಕಾಗಿದೆ.
ಟಿ.ಎಂ ಶಾಹೀದ್ ತೆಕ್ಕಿಲ್ ಸುಳ್ಯ ತಾಲೂಕು ಎನ್.ಎಸ್.ಯು.ಐ ನ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ರಾಜ್ಯ ಎಸ್ ಯು ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೇಸ್ ನ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಹಾಗೂ ಹಾವೇರಿ ಜಿಲ್ಲೆಯ ಹಿರೆಕೆರೂರು ಮತ್ತು ಕೊಡಗು ಜೆಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ.ಯ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಸದಸ್ಯತ್ವ ನೋಂದಣಿ ಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತು ದ ಕ ಜಿಲ್ಲೆಯಲ್ಲಿ ಗರಿಷ್ಠ ಸದಸ್ಯರನ್ನೂ ನೋಂದಾಯಿಸಿದ್ದು ಪಕ್ಷದ ಸಾಂಸ್ಥಿಕ ಚುನಾವಣೆಯ ಮಲಪ್ಪುರಂ ಜಿಲ್ಲೆಯ ಚುನಾವಣಾಧಿಕಾರಿಯಾಗಿದ್ದಾರೆ.
2001ರಲ್ಲಿ ರಾಜ್ಯ ಯುವ ಪ್ರಶಸ್ತಿಗೆ ಪಡೆದ ಇವರು ಸುಳ್ಯ ಅಲ್ಪಸಂಖ್ಯಾತರ ಸಹಕಾರಿ ಸಂಘದಲ್ಲಿ ಮೂರು ಬಾರಿ ಅಧ್ಯಕ್ಷರಾಗಿ,
ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿವ್ರದ್ಧಿ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರುಮಂಡಳಿ ಸದಸ್ಯರಾಗಿ, ರಾಜ್ಯದ ರಾಜೀವ್ ಯೂತ್ ಪೌಂಡೇಶನ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾಗಿ ಸಂಪಾಜೆ ಗೂನಡ್ಕ ತೆಕ್ಕಿಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಹಲವಾರು ಸಾಮಾಜಿಕ, ರಾಜಕೀಯ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ದುಡಿಯುತ್ತಿದ್ದಾರೆ. ಅವರು ಪ್ರತಿಷ್ಠಿತ ತೆಕ್ಕಿಲ್ ಮನೆತನದವರು.