ಆದಿತ್ಯವಾರ – ದ.ಕ 460 ಹಾಗೂ ರಾಜ್ಯದಲ್ಲಿ 9543 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಆದಿತ್ಯವಾರ ) ದ.ಕ ಜಿಲ್ಲೆಯಲ್ಲಿ 460 ಹಾಗೂ ರಾಜ್ಯದಲ್ಲಿ 9543 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 460 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22127 ಕ್ಕೆ ಏರಿಕೆಯಾಗಿದೆ. ಇಂದು 6 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 508 ಮಂದಿ ಬಲಿಯಾಗಿದ್ದಾರೆ.ಇಂದು 134 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 5537 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಇಂದು 9543 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ.ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,75,566ಕ್ಕೆ ಏರಿಕೆಯಾಗಿದೆ.ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 79 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,582ಕ್ಕೆ ಏರಿಕೆಯಾಗಿದೆ. ಇಂದು 6,522 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,62,241ಕ್ಕೆ ಏರಿಕೆಯಾಗಿದೆ. 1,04,724 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button