ಸುದ್ದಿ

ಬಾಲಿವುಡ್ ನಟ ದಿಲೀಪ್ ಕುಮಾರ್ ನಿಧನ…

ಮುಂಬೈ: ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ (98) ಅವರು ನಿಧನ ಹೊಂದಿದ್ದಾರೆಂದು ತಿಳಿದುಬಂದಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರಿಗೆ ಮುಂಬೈನ ಹಿಂದುಜ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ನಂತರ ಚೇತರಿಸಿಕೊಂಡು ಮನೆಗೆ ಮರಳಿದ್ದ ಅವರು ಪುನಃ ಅನಾರೋಗ್ಯ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆ ಸೇರಿದ್ದರು.
1922 ಡಿಸೆಂಬರ್ 11ರಲ್ಲಿ ಜನಸಿದ್ದ ದಿಲೀಪ್ ಕುಮಾರ್ ನಿಜವಾದ ಹೆಸರು ಮಹಮ್ಮದ್ ಯೂಸುಫ್ ಖಾನ್. ಹಾಗಾಗಿ ಇವರನ್ನು ಬಾಲಿವುಡ್ ನ ಮೊದಲ ಖಾನ್ ಎನ್ನಲಾಗುತ್ತಿತ್ತು. ಪತ್ನಿ ಸಾಯಿರಾ ಬಾನು ಜೊತೆ ತುಂಬು ಜೀವನ ನಡೆಸಿದ ದಿಲೀಪ್ ಕುಮಾರ್ ಇಂದು ಇಹಲೋಕ ತ್ಯಜಿಸಿದ್ದಾರೆ. 1944ರಲ್ಲಿ ಜ್ವರ್ ಭಾತಾ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ದಿಲೀಪ್ ಅಂದಾಜ್, ದಾಗ್, ದೇವದಾಸ್, ಆಜಾದ್, ಶಕ್ತಿ, ಮಸಾಲ್, ಸೌದಾಗರ್, ಕ್ರಾಂತಿ, ಮಘಲ್ ಎ ಆಜಮ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

Related Articles

Back to top button