ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಕುಳ ಗ್ರಾಮದಲ್ಲಿ ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ ಕಾರ್ಯಕ್ರಮ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ಕಿಲ್ ಫೋರ್ಜ್ ವಿದ್ಯಾರ್ಥಿ ಬಳಗ, WIE ಐಇಇಇ ವಿದ್ಯಾರ್ಥಿ ವಿಭಾಗ ಮತ್ತು ಗ್ರಾಮ ವಿಕಾಸ ಯೋಜನೆ VCET ಇದರ ಸಂಯುಕ್ತ ಆಶ್ರಯದಲ್ಲಿ ಕುಳ ಗ್ರಾಮದಲ್ಲಿ ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವನ್ನು ಅ.27 ರಂದು ಹಮ್ಮಿಕೊಳ್ಳಲಾಗಿತ್ತು.
ತಜ್ಞ ವೈದ್ಯರಿಂದ ಮಾಹಿತಿಯನ್ನು ಪಡೆದ ಸುಮಾರು 35 ವಿದ್ಯಾರ್ಥಿಗಳ ತಂಡವು ಉಪನ್ಯಾಸಕರ ಹಾಗೂ ಊರವರ ಸಹಕಾರದೊಂದಿಗೆ 170ಕ್ಕೂ ಹೆಚ್ಚಿನ ಮನೆಗಳಿಗೆ ಭೇಟಿ ನೀಡಿ ಕರಪತ್ರಗಳನ್ನು ಹಂಚಿ ಸ್ತನ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಿದರು.
ಕಾಲೇಜಿನ ಗ್ರಾಮ ವಿಕಾಸ ಯೋಜನೆಯನ್ವಯ ನಡೆದ ಈ ಕಾರ್ಯಕ್ರಮದಲ್ಲಿಸ್ಕಿಲ್ ಫೋರ್ಜ್ ವಿದ್ಯಾರ್ಥಿ ಬಳಗದ ಸಂಯೋಜಕ ಡಾ.ಶ್ರೀಶ ಭಟ್, ಐಇಇಇ ವಿದ್ಯಾರ್ಥಿ ವಿಭಾಗದ ಸಲಹೆಗಾರ್ತಿ ಪ್ರೊ.ರಜನಿ ರೈ.ಬಿ ಮತ್ತು ಕಾಲೇಜಿನ ಗ್ರಾಮ ವಿಕಾಸ ಯೋಜನೆಯ ಸಂಯೋಜಕಿ ಡಾ.ಸೌಮ್ಯ.ಎನ್.ಜೆ ಭಾಗವಹಿಸಿದರು.
ಮಾತೃ ಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶನದನ್ವಯ ಗ್ರಾಮವಿಕಾಸ ಯೋಜನೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಕುಳ ಗ್ರಾಮದಲ್ಲಿ ಆರೋಗ್ಯ ಶಿಬಿರ, ಗಿಡ ನೆಡುವ ಕಾರ್ಯಕ್ರಮ, ಆವಶ್ಯಕತೆ ಉಳ್ಳವರಿಗೆ ಸಹಾಯ ನೀಡುವುದು ಮುಂತಾದ ಹಲವಾರು ಚಟುವಟಿಕೆಗಳನ್ನು ನಡೆಸಲಾಗಿದೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

awareness programme kula (1)

awareness programme kula (2)

awareness programme kula (4)

Sponsors

Related Articles

Back to top button