ಸುದ್ದಿ

ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ – ಕಲಾ ಶಿಕ್ಷಕ ಮಂಜುನಾಥ್ ಬಂಗ್ಲೆಗುಡ್ಡೆ ಯವರಿಗೆ ಸನ್ಮಾನ…

ಸುಳ್ಯ: ಪಠ್ಯ ಚಟುವಟಿಕೆಗಳೊಂದಿಗೆ ಇತರ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ದೊರೆತಾಗ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಅದಕ್ಕೆ ಮಂಜುನಾಥ್ ರಂತಹ ಪ್ರತಿಭೆಗಳು ಇನ್ನಷ್ಟು ಹೊರ ಹೊಮ್ಮಬೇಕು ಎಂದು ನಗರ ಪಂಚಾಯತ್ ಸದಸ್ಯ ಕೆ. ಎಸ್. ಉಮ್ಮರ್ ಹೇಳಿದರು.
ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾಶಿಕ್ಷಕ ಮಂಜುನಾಥ್ ಬಂಗ್ಲೆಗುಡ್ಡೆ ಯವರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭ ದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಜೀದ್ ಜನತಾ ವಹಿಸಿದ್ದರು.ಮುಖ್ಯ ಅತಿಥಿಯಾಗಿ ದ. ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷ ಕೆ. ಎಂ. ಮುಸ್ತಫ ಬಾಗವಹಿಸಿದ್ದರು. ವೇದಿಕೆಯಲ್ಲಿ ಕಾರ್ಯದರ್ಶಿ ಲತೀಫ್ ಹರ್ಲಡ್ಕ, ಸಂಚಾಲಕ ಮುಹಿಯದ್ದೀನ್ ಫ್ಯಾನ್ಸಿ, ನಿರ್ದೇಶಕ ಶಾಫಿ ಕುತ್ತಮೊಟ್ಟೆ ಮುಖ್ಯಶಿಕ್ಷಕ ರಹೀಮ್ ಕಕ್ಕಿಂಜೆ,ವಿದ್ಯಾರ್ಥಿ ಸಂಘದ ನಾಯಕ ಫವಾಜ್, ಉಪನಾಯಕ ಆಯಾಜ್ ಉಪಸ್ಥಿತರಿದ್ದರು.
ಶಿಕ್ಷಕ ರಂಜಿತ್ ಸ್ವಾಗತಿಸಿ, ಫಾತೀಮ ಖಾಥೂನ್ ವಂದಿಸಿದರು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.
ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

Advertisement

Related Articles

Back to top button