ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ವತಿಯಿಂದ ಕಂಪ್ಯೂಟರ್ ಗಳ ಕೊಡುಗೆ…

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವತಿಯಿಂದ ಕೊಂಬೆಟ್ಟಿನ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಎರಡು ಕಂಪ್ಯೂಟರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು.
ಕೊಂಬೆಟ್ಟು ಪದವಿಪೂರ್ವ ಕಾಲೇಜಿನ ತಕ್ಷಣದ ಅಗತ್ಯತೆಯನ್ನು ಮನಗಂಡು ಕಂಪ್ಯೂಟರ್ ಗಳನ್ನು ಪ್ರಾಂಶುಪಾಲ ಪ್ರೊ.ಸುರೇಶ್ ಅವರಿಗೆ ಹಸ್ತಾಂತರಿಸಲಾಯಿತು. ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕ ಸುಬ್ರಮಣ್ಯ ಭಟ್ ಟಿ.ಎಸ್, ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ ಕೆ., ತರಬೇತಿ ಮತ್ತು ನೇಮಕಾತಿ ವಿಭಾಗದ ಪ್ರೊ.ವಂದನಾ ಶಂಕರ್ ಕಂಪ್ಯೂಟರ್ ಗಳನ್ನು ಹಸ್ತಾಂತರಿಸಿದರು.

Related Articles

Leave a Reply

Your email address will not be published.

Back to top button