ಸುದ್ದಿ

ದುಷ್ಕರ್ಮಿಗಳಿಂದ ಹತ್ಯೆಗೊಳಗಾದವರ ನಿವಾಸಗಳಿಗೆ ಕಾಂಗ್ರೆಸ್ ನಿಯೋಗ ಭೇಟಿ, ಸಾಂತ್ವನ…

ಮಂಗಳೂರು:ಕಳೆದ ಕೆಲ ದಿನಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದ ಮಸೂದ್, ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಹಾಗೂ ಮಂಗಳಪೇಟೆ ನಿವಾಸಿಯಾಗಿದ್ದ ಫಾಝಿಲ್ ರವರ ನಿವಾಸಕ್ಕೆ ಜು. 31 ರಂದು ವಿಪಕ್ಷ ನಾಯಕರಾದ ಬಿ.ಕೆ ಹರಿಪ್ರಸಾದ್ ರವರ ಜೊತೆ ವಿಧಾನ ಪರಿಷತ್ತಿನ ಸದಸ್ಯರು, ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಮಂಜುನಾಥ ಭಂಡಾರಿಯವರು ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಮೂರು ಪ್ರಕರಣಗಳಲ್ಲಿನ ನಿಜವಾದ ಅಪರಾಧಿಗಳನ್ನು ಅತ್ಯಂತ ಶೀಘ್ರವಾಗಿ ಪತ್ತೆ ಹಚ್ಚುವಂತೆ ಸರ್ಕಾರಕ್ಕೆ ಆಗ್ರಹಿಸಲಾಯಿತು.

ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೆ.ಹರೀಶ್ ಕುಮಾರ್, ಮಾಜಿ ಸಚಿವರುಗಳಾದ ಶ್ರೀ ಬಿ. ರಮಾನಾಥ ರೈ, ಶ್ರೀ ಅಭಯ ಚಂದ್ರ ಜೈನ್, ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಶೆಟ್ಟಿ, ರಕ್ಷಿತ್ ಶಿವರಾಂ, ಶ್ರೀಮತಿ ಕವಿತಾ ಸನಿಲ್, ಶ್ರೀಮತಿ ಪ್ರತಿಭಾ ಕುಳಾಯಿ, ಶ್ರೀ ಮೊಹಮ್ಮದ್ ಅಲ್ತಾಫ್ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

Related Articles

Back to top button