ಸುದ್ದಿ

ಕೊರೊನಾ ನಿಯಂತ್ರಣಕ್ಕೆ ದ. ಕ ಜಿಲ್ಲೆಯಲ್ಲಿ ನಾಳೆಯಿಂದ ಕಟ್ಟು ನಿಟ್ಟಿನ ಕ್ರಮ…

ಮಂಗಳೂರು : ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಸ್ತುವಾರಿ ಸಚಿವರು ಆದೇಶ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ತುರ್ತು ಕೋವಿಡ್‌ ನಿರ್ವಹಣಾ ಸಭೆಯಲ್ಲಿ ಈ ಬಗ್ಗೆ ನಿರ್ಣಯಿಸಲಾಗಿದೆ.
ಈ ಹಿನ್ನಲೆಯಲ್ಲಿ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. ವಾಹನಗಳಲ್ಲಿ ಬೇರೆ ಕಡೆಗೆ ಓಡಾಡಿದರೆ ವಾಹನವನ್ನು ಸೀಜ್‌ ಮಾಡಲಾಗುತ್ತದೆ. ಅನಗತ್ಯ ಓಡಾಟಕ್ಕೆ ಖಾಕಿಯಿಂದ ಕಠಿಣ ಕ್ರಮಕ್ಕೆ ಆದೇಶ ನೀಡಲಾಗಿದೆ. ಹತ್ತಿರದ ಔಷಧಾಲಯಗಳಿಂದ ವೈದ್ಯಕೀಯ ಸಾಮಗ್ರಿಗಳನ್ನು ಖರೀದಿಸಬಹುದು. ಮೇ.15 ರ ನಂತರ ಯಾವುದೇ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.

Related Articles

Back to top button