ಮಂಗಳವಾರ – ದ.ಕ 272 ಹಾಗೂ ರಾಜ್ಯದಲ್ಲಿ 9993 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಮಂಗಳವಾರ) ದ.ಕ ಜಿಲ್ಲೆಯಲ್ಲಿ 272 ಹಾಗೂ ರಾಜ್ಯದಲ್ಲಿ 9993 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 272 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 24829 ಕ್ಕೆ ಏರಿಕೆಯಾಗಿದೆ. ಇಂದು 7 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 581 ಮಂದಿ ಬಲಿಯಾಗಿದ್ದಾರೆ.ಇಂದು 382 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 5462 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಇಂದು 9993 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 6,57,705ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 91 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9,461ಕ್ಕೆ ಏರಿಕೆಯಾಗಿದೆ. ಇಂದು 10,228 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 5,33,074ಕ್ಕೆ ಏರಿಕೆಯಾಗಿದೆ. 1,15,151 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button