ಬಂಟ್ವಾಳ – ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಣೆ…

ಬಂಟ್ವಾಳ : ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಸಮಿತಿ ಇದರ ಆಶ್ರಯದಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ರವರ ಹುಟ್ಟುಹಬ್ಬದ ಪ್ರಯುಕ್ತ ಬಂಟ್ವಾಳ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲುಗಳನ್ನು ವಿತರಿಸಲಾಯಿತು.
ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಅವರು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಮಂಜುಳಾ ಮಾಧವ ಮಾವೆ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ ಪೂಜಾರಿ,ಬಂಟ್ವಾಳ ಸಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ವಿ ಶೆಟ್ಟಿ,ಪುರಸಭಾ ಸದಸ್ಯರಾದ ವಾಸು ಪೂಜಾರಿ ಲೊರೆಟ್ಟೊ,ಜೋಸ್ಪಿನ್ ಡಿಸೋಜ,ಕರಿಯಂಗಳ ಮಾಜಿ ಪಂಚಾಯತ್ ಅಧ್ಯಕ್ಷರು ಶ್ರೀಮತಿ ವೀಣಾ ಆಚಾರ್ಯ, ಪಿ ಸುವರ್ಣ ಕುಮಾರ್ ಜೈನ್ ಮೊದಲಾದವರು ಉಪಸ್ಥಿತರಿದ್ದರು

Sponsors

Related Articles

Leave a Reply

Your email address will not be published. Required fields are marked *

Back to top button