ಸುದ್ದಿ

ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾl ಕೆ.ವಿ. ರಾಜೇಂದ್ರ ಅವರಿಗೆ ಕೋವಿಡ್ ಸೋಂಕು ದೃಢ…

ಮಂಗಳೂರು : ದಕ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಮನೆಯಲ್ಲೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಜೊತೆಗೆ ಅವರ ಪತ್ನಿ ಹಾಗೂ ಮಗುವಿಗೂ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಜಿಲ್ಲಾಧಿಕಾರಿಯವರು ಪ್ರಸ್ತುತ ಗೃಹ ಕಚೇರಿಯಿಂದಲೇ ಕರ್ತವ್ಯವನ್ನು ನಿರ್ವಹಿಸುತ್ತಿರುತ್ತಾರೆ. ಈ ಸಮಯದಲ್ಲಿ ಜಿಲ್ಲಾಧಿಕಾರಿಯವರಿಗೆ ಯಾವುದೇ ಕರೆಗಳನ್ನು ಮಾಡದೇ ಅವಶ್ಯವಿದ್ದಲ್ಲಿ ಮಾತ್ರ ವಾಟ್ಸಪ್ ಹಾಗೂ ಎಸ್ಎಮ್ ಎಸ್ ಮೂಲಕ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಕೂಡಾ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

Related Articles

Leave a Reply

Your email address will not be published.

Back to top button