ಸುದ್ದಿ

ದ.ಕ – ಜಿಲ್ಲೆಯಲ್ಲಿ ಕೊರೊನಾಗೆ ಎಂಟನೇ ಬಲಿ…

ಮಂಗಳೂರು: ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ್ದ 26 ವರ್ಷದ ಯುವಕ ಕೊರೊನಾ ಸೋಂಕಿನ ಕಾರಣದಿಂದ ಸಾವನ್ನಪ್ಪಿರುವ ಬಗ್ಗೆ ತಿಳಿದುಬಂದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 8 ಕ್ಕೇರಿದಂತಾಗಿದೆ.

ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ‌ಮುಗಿಸಿ ಮನೆಗೆ ಹೋಗಿದ್ದ 26 ವರ್ಷದ ಯುವಕ ಕಿಡ್ನಿ ಸಮಸ್ಯೆ ಹಿನ್ನೆಲೆ ಮತ್ತೆ ‌ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಯುವಕನಿಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದ್ದು, ಆ ವೇಳೆ ಆತನಿಗೆ ಕೋವಿಡ್-19 ಸೋಂಕು ಇರುವುದು ದೃಢವಾಗಿದೆ.

Related Articles

Leave a Reply

Your email address will not be published.

Back to top button