ಸುಳ್ಯ ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ನಂದಕುಮಾರ್…
![](wp-content/uploads/2021/02/d39559e1-ac61-443c-b852-b085ca67ce74-780x470.webp)
ಸುಳ್ಯ: ಸುಳ್ಯ ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ನಂದಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಡಾ.ಎಂ.ಆರ್.ಸುಬ್ರಹ್ಮಣ್ಯ ನಿವೃತ್ತರಾದ ಹಿನ್ನಲೆಯಲ್ಲಿ ಡಾ.ನಂದಕುಮಾರ್ ಪ್ರಭಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಸಂಚಾರಿ ಗಿರಿಜನ ಆರೋಗ್ಯ ಘಟಕದಲ್ಲಿ ಹಿರಿಯ ವೈದ್ಯಾಧಿಕಾರಿಯಾಗಿರುವ ಡಾ.ನಂದಕುಮಾರ್ 1998ರಲ್ಲಿ ಸರಕಾರಿ ಸೇವೆಗೆ ಸೇರ್ಪಡೆಗೊಂಡರು. 1998ರಿಂದ 2006ರವರೆಗೆ ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರ , 2006ರಿಂದ 2015ರವರೆಗೆ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಸೇವೆ ಸಲ್ಲಿಸಿದ ಅವರು 2015ರಿಂದ ಹಿರಿಯ ವೈದ್ಯಾಧಿಕಾರಿಯಾಗಿ ಪದೋನ್ನತಿ ಹೊಂದಿ ಸಂಚಾರಿ ಗಿರಿಜನ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.