ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮಿ ದೈವಾಧೀನ….

ಕಾಸರಗೋಡು: ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮಿ (79) ರಾತ್ರಿ ಸುಮಾರು 12.30 ರ ವೇಳೆಗೆ ದೈವಾದೀನರಾಗಿದ್ದಾರೆ.
ಕೆಲದಿನಗಳ ಹಿಂದಷ್ಟೇ ತಮ್ಮ 60ನೇ ಚಾತುರ್ಮಾಸ ವ್ರತಾಚರಣೆಯನ್ನು ಶ್ರೀಗಳು ಸಮಾಪ್ತಿಗೊಳಿಸಿದ್ದರು. ಶ್ರೀಗಳು ಅತ್ಯಂತ ಕಿರಿಯ ವಯಸ್ಸಿಗೇ ಸನ್ಯಾಸ ದೀಕ್ಷೆ ಸ್ವೀಕರಿಸಿ, ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳ ಬಳಿಕ ಅತಿ ಹೆಚ್ಚು ಚಾತುರ್ಮಾಸ್ಯ ವೃತಾಚರಣೆ ನಡೆಸಿದವರಾಗಿದ್ದಾರೆ.. ಧಾರ್ಮಿಕವಾಗಿಯೂ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ತಮ್ಮ ಸಂಸ್ಥಾನವನ್ನು ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಅವರು ಎಡನೀರು ಮೇಳವನ್ನು ಮುನ್ನಡೆಸುತ್ತಾ, ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.
ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿಯಲ್ಲೂ ಶ್ರೀಗಳ ಹೆಸರು ಚಿರಸ್ಥಾಯಿಯಾಗಿದೆ. ಕೇಶವಾನಂದ ಭಾರತಿ ವರ್ಸಸ್ ಕೇರಳ ಸರ್ಕಾರ ಪ್ರಕರಣ ಭಾರಿ ಖ್ಯಾತಿ ಪಡೆದಿತ್ತು. ದೇಶದಲ್ಲೇ ಸಂಚಲನ ಉಂಟು ಮಾಡಿದ್ದ ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅತೀ ಅಪರೂಪ ಎಂಬಂತೆ 13 ಮಂದಿ ನ್ಯಾಯಾಧೀಶರ ಪೀಠ ರಚಿಸಿ ಕೈಗೊಂಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ.

 

 

Sponsors

Related Articles

Leave a Reply

Your email address will not be published. Required fields are marked *

Back to top button