ಜೂನ್ 14ರ ನಂತರ 5 ಹಂತಗಳಲ್ಲಿ ಅನ್ ಲಾಕ್ ಮಾಡಲು ಸರ್ಕಾರ ನಿರ್ಧಾರ – ಸಚಿವ ಆರ್. ಅಶೋಕ್…

ಬೆಂಗಳೂರು: ಜೂನ್ 14ರ ನಂತರ 5 ಹಂತಗಳಲ್ಲಿ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಜೂನ್ 14ಕ್ಕೆ ಲಾಕ್ ಡೌನ್ ಮುಕ್ತಾಯವಾಗಿ ಏಕಾಏಕಿ ಒಂದೇ ಸಲಕ್ಕೆ ಅನ್ ಲಾಕ್ ಆಗುವುದಿಲ್ಲ, ಆ ರೀತಿ ಜನರು ಭಾವಿಸಬೇಡಿ, ಒಂದೇ ಸಲಕ್ಕೆ ತೆರೆದರೆ ಮತ್ತೆ ಕೊರೋನಾ ಸೋಂಕು ಹೆಚ್ಚಾಗುವ ಸಾಧ್ಯತೆಯಿದೆ ಎಂದ ಅವರು ಯಾವ ರೀತಿ ತೆರೆಯುವುದು, ಮೊದಲ ಹಂತದಿಂದ ಯಾವುದಕ್ಕೆಲ್ಲಾ ವಿನಾಯ್ತಿ ನೀಡುತ್ತಾ ಹೋಗುವುದು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ, ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮೊದಲ ಹಂತದಲ್ಲಿ ಖರೀದಿಗೆ ವಿಸ್ತರಿಸಲು ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ, ಪಾರ್ಕ್ ಗಳಲ್ಲಿ ವಾಕಿಂಗ್ ಗೆ ಅವಕಾಶ ನೀಡುವುದು ಹೀಗೆ ಹಂತ ಹಂತವಾಗಿ ಅನ್ ಲಾಕ್ ಮಾಡುವ ಯೋಜನೆ ಸರ್ಕಾರದ ಮಟ್ಟದಲ್ಲಿ ನಡೆಯುತ್ತಿದೆ ಎಂದರು.
ಯಾವ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಕಡಿಮೆಯಿರುತ್ತದೆಯೋ ಅಲ್ಲಿ ಹಂತಹಂತವಾಗಿ ಅನ್ ಲಾಕ್ ನಡೆಸಲಾಗುವುದು. ಅಂತರ ಜಿಲ್ಲೆ, ಸಾರಿಗೆ ವ್ಯವಸ್ಥೆ ಓಡಾಟ ಆರಂಭ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ, ಅನ್ ಲಾಕ್ ಏಕಾಏಕಿ ತೆಗೆಯಲು ಸಾಧ್ಯವಿಲ್ಲ, ನಿರ್ಬಂಧ ಸಡಿಲಿಸುತ್ತಾ ಹೋದಂತೆ ಸೋಂಕು ಹರಡುವ ಪ್ರಮಾಣ ಕೂಡ ನೋಡಬೇಕಾಗುತ್ತದೆ ಎಂದು ಸಚಿವ ಆರ್ ಅಶೋಕ್ ಹೇಳಿದರು.

Sponsors

Related Articles

Back to top button