ಬಂಟ್ವಾಳ – ಎಸ್.ಎಸ್ ಎಲ್.ಸಿ ಹಾಗೂ ಪಿ.ಯು.ಸಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ….

ಬಂಟ್ವಾಳ: NSUI ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ “ನಮ್ಮೂರ ಹೆಮ್ಮೆ” ಕಾರ್ಯಕ್ರಮದಡಿ ಕರ್ನಾಟಕ ಸರ್ಕಾರದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಅನಂತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎಸ್.ಎಸ್ ಎಲ್.ಸಿ ಹಾಗೂ ಪಿ.ಯು.ಸಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ “ಸಂವಿಧಾನ ಓದು” ಪುಸ್ತಕ ನೀಡಿ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ ಪೂಜಾರಿ, ತುಂಬೆ ಬಿ.ಎ.ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಗಂಗಾಧರ್ ಆಳ್ವ ಎನ್.ಎಸ್.ಯು.ಐ ನ ರಾಜ್ಯ ಕಾರ್ಯದರ್ಶಿ ಫಾರೂಕ್ ಬಯಾಬೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಬಾತಿಷ್ ಅಳಕೆಮಜಲು,ಬಂಟ್ವಾಳ ‌ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿನಯ್ ಕುಮಾರ್,ಪ್ರಧಾನ ಕಾರ್ಯದರ್ಶಿ ಅಂಕುಶ್ ಶೆಟ್ಟಿ, ಸಾಮಾಜಿಕ ಜಾಲತಾಣ ಸಂಯೋಜಕ ನಜೀಬ್ ಮಂಚಿ ಹಾಗೂ NSUI ಕಾರ್ಯಕರ್ತರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button