ಡಾ. ಲೀಲಾಧರ್ ಅವರಿಗೆ ಅಭಿನಂದನೆ…

ಸುಳ್ಯ: ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನೂತನ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡ ಡಾ. ಲೀಲಾಧರ್ ರವರಿಗೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರು ಶಾಲು ಹೊದೆಸಿ ಗೌರವಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಕೋಶಾಧಿಕಾರಿ ಶ್ರೀಮತಿ ಶೋಭಾ ಚಿದಾನಂದ, ಜತೆ ಕಾರ್ಯದರ್ಶಿ ಕೆ.ವಿ. ಹೇಮನಾಥ್, ನಿರ್ದೇಶಕರುಗಳಾದ ಅಕ್ಷಯ್ ಕೆ.ಸಿ, ಡಾ. ಐಶ್ವರ್ಯ ಕೆ.ಸಿ, ಡಾ. ಗೌತಮ್ ಗೌಡ ಎ.ಜಿ ಸೇರಿದಂತೆ ಕಾಲೇಜಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕೆ.ವಿ.ಜಿ. ಆಯುರ್ವೇದ ಫಾರ್ಮಾ ಮತ್ತು ರಿಸರ್ಚ್ ಸೆಂಟರ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪುರುಷೋತ್ತಮ್ ಕಾರ್ಯಕ್ರಮ ನಿರೂಪಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button