ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ – ಕರಾವಳಿಯಲ್ಲಿ ಯೆಲ್ಲೋ ಅಲರ್ಟ್….
ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಇಂದು ನೀಡಿದೆ.
ಕರಾವಳಿಯಲ್ಲಿ ಅಲ್ಲಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಉತ್ತಮ ಮಳೆಯಾಗಿತ್ತು.ಕರ್ನಾಟಕ ಕರಾವಳಿಯೊಂದಿಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿಯೂ ಮಳೆಯಾಗಲಿದೆ. ಛತ್ತೀಸ್ಗಢ, ಒಡಿಶಾ, ಮೇಘಾಲಯ, ನಾಗಾಲ್ಯಾಂಡ್, ಅಸ್ಸಾಂ, ಮಣಿಪುರ ಮತ್ತು ಮಿಜೋರಾಂನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಸಂಸ್ಥೆ ತಿಳಿಸಿದೆ.