ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು – ‘ಕಲಾ ಕದನ’ ದ ಬಹುಮಾನ ವಿತರಣಾ ಕಾರ್ಯಕ್ರಮ…

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಯ ಕಾರ್ಯಕ್ರಮ ಕಲಾ ಕದನದ ಬಹುಮಾನ ವಿತರಣಾ ಕಾರ್ಯಕ್ರಮವು ಕಾಲೇಜಿನ ಆವರಣದಲ್ಲಿ ನಡೆಯಿತು.
ವಿಜೇತರಿಗೆ ಬಹುಮಾನವನ್ನು ವಿತರಿಸಿದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸುಬ್ರಮಣ್ಯ ಭಟ್.ಟಿ.ಎಸ್ ಮಾತನಾಡಿ ಪಾಠದ ಜತೆಗೆ ಪಠ್ಯೇತರ ವಿಷಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದಾಗ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳಲು ಸಹಕಾರಿಯಾಗುತ್ತದೆ ಮತ್ತು ಕಲಿಕೆಯ ಮಟ್ಟವು ಏರಿಕೆಯಾಗುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ, ಸೋಲುಗೆಲುವು ಸಾಮಾನ್ಯ. ಅದನ್ನು ಸಮಚಿತ್ತದಿಂದ ಸ್ವೀಕರಿಸಿ ಭಾಗವಹಿಸಿ ಎಂದರು.
ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ ಕೆ ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಇಂತಹ ಅನೇಕ ಕಾರ್ಯಕ್ರಮಗಳನ್ನು ಕಾಲೇಜು ನಡೆಸುತ್ತದೆ. ಇದರಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳುವ ಜವಾಬ್ದಾರಿ ನಿಮ್ಮದು ಎಂದರು.
ಕಾಲೇಜಿನ ಭೂಮಿಕಾ ಕಲಾ ಸಂಘದ ಆಶ್ರಯದಲ್ಲಿ ವಿಶ್ವೇಶ್ವರಯ್ಯ ಸಭಾಭವನದಲ್ಲಿ ಮೇಳೈಸಿದ ಈ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಆರು ತಂಡಗಳು ಭಾಗವಹಿಸಿದ್ದವು. ನಿರ್ದಿಷ್ಟ ಸಮಯದಲ್ಲಿ ಅತಿ ಹೆಚ್ಚು ವೈವಿಧ್ಯಮಯ ಕಾರ್ಯಕ್ರಮವನ್ನು ನೀಡುವ ಗುರಿಯನ್ನು ನಿಗದಿಪಡಿಸಲಾಗಿತ್ತು. ಸೈನಿಕರ ಜೀವನ, ಭಾರತೀಯ ಸಂಸ್ಕೃತಿ, ಮಹಿಳಾ ಸಬಲೀಕರಣ, ಕಾಲೇಜು ಜೀವನ, ಅಮ್ಮ, ಭಾರತೀಯ ಹಾಗೂ ಪಾಶ್ಚಾತ್ಯ ಸಂಸ್ಕೃತಿ ಎನ್ನುವ ವಿಷಯಗಳ ಬಗ್ಗೆ ವಿನೂತನ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ತಜ್ಞರು ನೀಡಿದ ಅಂಕಗಳು ಮತ್ತು ಯೂ ಟ್ಯೂಬ್‍ನಲ್ಲಿ ಅತಿ ಹೆಚ್ಚು ಜನರು ನೋಡಿದ ವಿಡಿಯೋ ಹೀಗೆ ಇದನ್ನು ಕ್ರೂಢೀಕರಿಸಿ ವಿಜೇತ ತಂಡವನ್ನು ಆಯ್ಕೆ ಮಾಡಲಾಗಿತ್ತು. ಎ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಮತ್ತು ಬಿ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಭೂಮಿಕಾ ಕಲಾ ಸಂಘದ ಸಂಯೋಜಕ ಪ್ರೊ. ಸುದರ್ಶನ್ ಎಂ ಎಲ್ ವಿಜೇತರ ಪಟ್ಟಿಯನ್ನು ಓದಿದರು. ಸಹ ಸಂಯೋಜಕಿ ಪ್ರೊ.ಶ್ವೇತಾಂಬಿಕಾ.ಪಿ ವಂದಿಸಿದರು. ಪ್ರೊ.ಶ್ರೀಶರಣ್ಯ ಯು ಆರ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button