ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಕೋವಿಡ್ ಟಾಸ್ಕ್ ಫೋರ್ಸ್ ಸಭೆ,ಕಿಟ್ ವಿತರಣೆ…

ಸುಳ್ಯ: ಗ್ರಾಮ ಪಂಚಾಯತ್ ಸಂಪಾಜೆ ವತಿಯಿಂದ ಕೋವಿಡ್ ಟಾಸ್ಕ್ ಫೋರ್ಸ್ ಸಾಮಾನ್ಯ ಸಭೆ ಹಾಗು ಅಂಗನವಾಡಿ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರು ಹಾಗು ಗ್ರಾಮ ಪಂಚಾಯತ್ ಸಿಬ್ಬಂದಿಗೆ ಕಿಟ್ ವಿತರಿಸುವ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಸರಕಾರವು ಹೆಚ್ಚಿನ ಅನುದಾನ ನೀಡಿ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಬಗ್ಗೆ ನಿರ್ಣಯಿಸಲಾಯಿತು. ಪ್ರತಿ ಭಾರಿ ಚರ್ಚಿಸುವ ವಿಷಯವಾದ ಗೂನಡ್ಕ ನರ್ಸ್ ಕ್ವಾಟ್ರಸ್ ಬಗ್ಗೆ ಪಿ ಕೆ ಅಬುಶಾಲಿ ಗೂನಡ್ಕ ಪ್ರಸ್ತಾಪಿಸಿದರು
ಕಾರ್ಯಕ್ರಮದ ಪ್ರಮುಖ ಅಂಗವಾದ ಕಿಟ್ ವಿತರಣೆಗೆ ಸಹಕರಿಸಿದ ದಾನಿಗಳಾದ ಟಿ ಎಂ ಶಾಹೀದ್ ತೆಕ್ಕಿಲ್ ಹಾಗು ದಾನಿಗಳನ್ನು ವಿಶೇಷವಾಗಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಟಿ ಎಂ ಶಾಹೀದ್ ತೆಕ್ಕಿಲ್ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು ಹಾಗು ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿಗಳು ಈ ಸಂಕಷ್ಟದ ಸಮಯದಲ್ಲಿ ದೇಶ ಕಾಯುವ ಸೈನಿಕರಂತೆ ದೇಶದ ಪ್ರತಿಯೊಬ್ಬರ ಅರೋಗ್ಯ ಕಾಯುವ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವುದಕ್ಕೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿದರು.ಅವರು ಸಂಪಾಜೆ ಗ್ರಾಮ ಪಂಚಾಯತ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ಕಿಟ್ ವಿತರಣೆಗೆ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ವಹಿಸಿದ್ದರು. ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯಾದ ಸರಿತಾ ಡಿಸೋಜ ಸರ್ವರನ್ನು ಸ್ವಾಗತಿಸಿದರು .ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷಲೆಸ್ಸಿ ಮೊನಾಲಿಸಾ, ಕೆಎಫ್ ಡಿಸಿ ರೇಂಜರ್ ಭರತ್, ಮಾಜಿ ಅಧ್ಯಕ್ಷ ಮಹಮ್ಮದ್ ಕುಂಞ ಗೂನಡ್ಕ, ಸದಸ್ಯರಾದ ಜಗದೀಶ್ ರೈ,ಪಿ ಕೆ ಅಬುಶಾಲಿ,ಶವಾದ್ ಗೂನಡ್ಕ, ಎಸ್ ಕೆ ಹನೀಫ್,ವಿಮಲಾ ಪ್ರಸಾದ್, ವಿಜಯ,ರಜನಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತರು,ಆಶಾ ಕಾರ್ಯಕರ್ತರು,ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯರು ಉಪಸ್ಥಿತರಿದ್ದರು. ಪಿ ಕೆ ಅಬುಶಾಲಿ ಗೂನಡ್ಕ ವಂದಿಸಿದರು.

Sponsors

Related Articles

Back to top button