ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ…

ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರು ಇಂದು ಮೃತಪಟ್ಟಿದ್ದಾರೆ.

ಕಳೆದ 20 ದಿನಗಳಿಂದ ದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 84 ವರ್ಷದ ಪ್ರಣಬ್ ಮುಖರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಪುತ್ರ ಅಭಿಜಿತ್ ಅವರ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಶ್ವಾಸಕೋಶದ ಸೋಂಕಿನಿಂದ ಪ್ರಣಬ್ ಮುಖರ್ಜಿ ಆಗಸ್ಟ್ 10ರಂದು ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಮೂತ್ರಪಿಂಡದಲ್ಲೂ ಸಮಸ್ಯೆಯಾಗಿದೆ. ದಿನಕಳೆದಂತೆ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಕ್ಷೀಣಿಸುತ್ತಾ ಹೋಗಿತ್ತು.ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಬಳಿಕ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು.
1935 ಡಿಸೆಂಬರ್ 11 ರಂದು ಜನಿಸಿದ್ದ ಪ್ರಣಬ್ ಮುಖರ್ಜಿ ಭಾರತೀಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದರು. ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಕಿಂಕರ ಮುಖರ್ಜಿ ರಾಜಲಕ್ಷ್ಮಿ ದಂಪತಿಯ ಪುತ್ರನಾಗಿ ಜನಿಸಿದ ಅವರು ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಎಂಎ ಎಲ್.ಎಲ್.ಬಿ. ಪದವಿ ಪಡೆದಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button