ಶುಕ್ರವಾರ – ದ.ಕ 17 , ಉಡುಪಿ 22 ,ಕಾಸರಗೋಡು 4 ಕೊರೊನ ಪಾಸಿಟಿವ್ ಪ್ರಕರಣ ಪತ್ತೆ…

ಮಂಗಳೂರು: ಇಂದು (ಶುಕ್ರವಾರ) ದ.ಕ ಜಿಲ್ಲೆಯಲ್ಲಿ 17 , ಉಡುಪಿ ಜಿಲ್ಲೆಯಲ್ಲಿ 22 ಹಾಗೂ ಕಾಸರಗೋಡು ಜಿಲ್ಲೆಯಲ್ಲಿ 4 ಕೊರೊನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ರಾಜ್ಯದಲ್ಲಿ ಇಂದು ಹೊಸದಾಗಿ 271 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢವಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6516ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2995 ಸಕ್ರಿಯ ಪ್ರಕರಣಗಳಿದ್ದು, 19 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಪತ್ತೆಯಾದ 271 ಸೋಂಕಿತರ ಪೈಕಿ 92 ಮಂದಿ ಹೊರರಾಜ್ಯ ಪ್ರಯಾಣದ ಇತಿಹಾಸ ಹೊಂದಿದ್ದು, 14 ಮಂದಿ ವಿದೇಶ ಪ್ರಯಾಣದ ಇತಿಹಾಸ ಹೊಂದಿದ್ದಾರೆ.
ಬಳ್ಳಾರಿ 97, ಬೆಂಗಳೂರು 36, ಉಡುಪಿ 22, ಕಲಬುರ್ಗಿ 20, ಧಾರವಾಡ 19, ದಕ್ಷಿಣ ಕನ್ನಡ 17, ಬೀದರ್ 10, ಹಾಸನ 9, ಮೈಸೂರು 9, ತುಮಕೂರು 7, ಶಿವಮೊಗ್ಗ 6, ರಾಯಚೂರು 4, ಉತ್ತರ ಕನ್ನಡ 4, ಚಿತ್ರದುರ್ಗ 3, ರಾಮನಗರ 3, ಮಂಡ್ಯ 2, ಬೆಳಗಾವಿ, ವಿಜಯಪುರ, ಯಾದಗಿರಿಯಲ್ಲಿ ತಲಾ ಒಂದು ಕೊರೋನಾ ಪ್ರಕರಣಗಳು ವರದಿಯಾಗಿವೆ.
ಬೆಂಗಳೂರು ನಗರದ 61 ವರ್ಷದ ಮಹಿಳೆ, 52 ವರ್ಷದ ಪುರುಷ, 49 ವರ್ಷದ ಮಹಿಳೆ, ಹಾಸನದ 60 ವರ್ಷದ ವ್ಯಕ್ತಿ ಹಾಗೂ ಕಲಬುರಗಿಯಲ್ಲಿ 53 ವರ್ಷದ ಮತ್ತು 46 ವರ್ಷದ ಪುರುಷರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಇನ್ನು ಕಾಸರಗೋಡು ಜಿಲ್ಲೆಯಲ್ಲಿ ಇಂದು ನಾಲ್ಕು ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಬಂದ ಇಬ್ಬರು ಮಹಿಳೆಯರು ಹಾಗೂ ವಿದೇಶದಿಂದ ಬಂದ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button