ಸುದ್ದಿ

ಶುಕ್ರವಾರ – ದ.ಕ 220 ಹಾಗೂ ರಾಜ್ಯದಲ್ಲಿ 7542 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಶುಕ್ರವಾರ) ದ.ಕ ಜಿಲ್ಲೆಯಲ್ಲಿ 220 ಹಾಗೂ ರಾಜ್ಯದಲ್ಲಿ 7542 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 220 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 27959 ಕ್ಕೆ ಏರಿಕೆಯಾಗಿದೆ. ಇಂದು 5 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 624 ಮಂದಿ ಬಲಿಯಾಗಿದ್ದಾರೆ.ಇಂದು 391 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು 7542 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 7,51,390ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 73 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,356ಕ್ಕೆ ಏರಿಕೆಯಾಗಿದೆ. ಇಂದು 8,580 ಮಂದಿ ಆಸ್ಪತ್ರೆ ಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,28,588ಕ್ಕೆ ಏರಿಕೆಯಾಗಿದೆ. 1,12,427 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 946 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related Articles

Leave a Reply

Your email address will not be published.

Back to top button