ಶುಕ್ರವಾರ – ದ.ಕ 139 , ಉಡುಪಿ 34 ಹಾಗೂ ರಾಜ್ಯದಲ್ಲಿ 2313 ಕೊರೊನ ಸೋಂಕು ಪತ್ತೆ…

ಮಂಗಳೂರು: ಇಂದು(ಶುಕ್ರವಾರ) ದ.ಕ ಜಿಲ್ಲೆಯಲ್ಲಿ 139 ,ಉಡುಪಿ ಜಿಲ್ಲೆಯಲ್ಲಿ 34 ಹಾಗೂ ರಾಜ್ಯದಲ್ಲಿ 2313 ಕೊರೊನ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯಲ್ಲಿ 139 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಈ ನಡುವೆ 51 ಮಂದಿ ಶುಕ್ರವಾರದಂದು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಗೊಂದಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು 8 ಮಂದಿ ಮೃತಪಟ್ಟಿದ್ದಾರೆ. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಮೃತರ ಪೈಕಿ 35, 65, 67, 48, 57, 68 ಮತ್ತು 55 ವರ್ಷದ ಪುರುಷರು ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೆ, 58 ವರ್ಷದ ವೃದ್ದೆ ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇಂದು ಒಟ್ಟು 34 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1477 ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ 11 ಮಂದಿಗೆ ILI , ಅಂತರ್ ರಾಷ್ಟ್ರೀಯ ಪ್ರಯಾಣದಿಂದ ಮೂವರಿಗೆ, ಅಂತರ್ ಜಿಲ್ಲಾ ಪ್ರಯಾಣದಿಂದ ಐದು ಮಂದಿಗೆ ಸೋಂಕು ತಗಲಿದೆ. ಅಲ್ಲದೆ 15 ಮಂದಿಯ ಸಂಪರ್ಕ ಪತ್ತೆಹಚ್ಚಲಾಗುತ್ತಿದೆ.
ಇನ್ನು ರಾಜ್ಯದಲ್ಲಿ ಒಟ್ಟು 2313 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33,418ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 29 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 57 ಮಂದಿ ಸಾವನ್ನಪ್ಪಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button