ಸುದ್ದಿ

ಸುಳ್ಯ – ಗಿರೀಶ್ ಭಾರದ್ವಾಜ್ ಅವರಿಗೆ ಪತ್ನಿ ವಿಯೋಗ….

ಸುಳ್ಯ: ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರದ್ವಾಜ್ ಅವರ ಪತ್ನಿ ಉಷಾ ಭಾರದ್ವಾಜ್ ಇಂದು ಮುಂಜಾನೆ ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಷಾ ಭಾರದ್ವಾಜ್ ಅವರನ್ನು ನಿನ್ನೆ ತಡರಾತ್ರಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಅರಂಬೂರಿನ ಮನೆಗೆ ತರಲಾಗಿದೆ. ಅವರು ಪತಿ, ಇಬ್ಬರು ಪುತ್ರರು, ಓರ್ವ ಪುತ್ರಿ ಯನ್ನು ಅಗಲಿದ್ದಾರೆ.

Related Articles

Leave a Reply

Your email address will not be published.

Back to top button