ಸೋಮವಾರ – ದ.ಕ 23, ಉಡುಪಿ 2 ಹಾಗೂ ರಾಜ್ಯದಲ್ಲಿ 213 ಮಂದಿಗೆ ಕೊರೋನಾ ಸೋಂಕು ಪತ್ತೆ…

ಮಂಗಳೂರು : ಇಂದು (ಸೋಮವಾರ) ದ.ಕ ಜಿಲ್ಲೆಯಲ್ಲಿ 23 , ಉಡುಪಿ ಜಿಲ್ಲೆಯಲ್ಲಿ 2 ಹಾಗೂ ರಾಜ್ಯದಲ್ಲಿ 213 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಇಂದು ಜಿಲ್ಲೆಯಲ್ಲಿ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ 149 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇಂದು 23 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 291 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ರಾಜ್ಯದಲ್ಲಿ ಇಂದು 213 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 7213ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 35 ,ಕಲಬುರಗಿ 48, ಧಾರವಾಡ 34, ರಾಯಚೂರು 18, ಯಾದಗಿರಿ 13, ಬೀದರ್ 11, ಬಳ್ಳಾರಿ 10, ಕೊಪ್ಪಳ 4, ವಿಜಯಪುರ 3, ಬಾಗಲಕೋಟೆ 3, ಶಿವಮೊಗ್ಗ 3, ಹಾವೇರಿ 2, ರಾಮನಗರ 2, ಹಾಸನ 1 ಮತ್ತು ದಾವಣಗೆರೆಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button