ಅರಂತೋಡು ಶಾದಿ ಮಹಲ್ ಕಟ್ಟಡ ಉದ್ಘಾಟನಾ ಸಮಾರಂಭ…

ಸುಳ್ಯ: ಜನಸೇವೆ ಮಾಡುವುದು, ಬಡವರ ಆಶಾಕಿರಣ ಆಗುವುದೇ ನಿಜವಾದ ರಾಜಕೀಯ ಎಂದು ವಿಧಾನ ಪರಿಷತ್‌‌ನ ವಿರೋಧ ಪಕ್ಷದ ನಾಯಕರಾದ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಅರಂತೋಡಿನ ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್‌ನ ನೇತೃತ್ವದಲ್ಲಿ ಅರಂತೋಡಿನ ಉದಯನಗರದಲ್ಲಿ ನೂತನವಾಗಿ ನಿರ್ಮಿಸಿದ ಅನ್ವಾರುಲ್ ಹುಧಾ ಶಾದಿಮಹಲ್ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಎಲ್ಲಾ ಧರ್ಮಗಳಿಗೂ ಅವರದ್ದೇ ಆದ ಗ್ರಂಥಗಳು ಇದೆ. ಆದರೆ ಸ್ವತಂತ್ರ ಭಾರತದಲ್ಲಿ ಸಂವಿಧಾನ ಎಲ್ಲರ ಗ್ರಂಥ. ಸಂವಿಧಾನದಿಂದ ಈ ದೇಶ ಸದೃಢವಾಗಿ ಉಳಿದಿದೆ. ಆದುದರಿಂದ ಸಂವಿಧಾನವನ್ನು ಉಳಿಸಿ ಬೆಳೆಸಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ಅವರು ಹೇಳಿದರು.
ನೂತನ ಸಭಾಂಗಣವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯರು ಹಾಗು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ಮಾತನಾಡಿ ‘ಸಮಾಜ ಕಟ್ಟಲು ಎಲ್ಲರ ಸಹಕಾರ ಬೇಕು, ಎಲ್ಲರೂ ಒಂದಾಗಿ ಶಾಂತಿ, ಸೌಹಾರ್ಧತೆಯಿಂದ ಬಾಳಿದಾಗ ನಾಡು ಸರ್ವ ಜನಾಂಗದ ಶಾಂತಿಯ ತೋಟ ಆಗಲು ಸಾಧ್ಯ ಎಂದರು. ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ಸುದೀರ್ಘ ಕಾಲ ಅತ್ಯುತ್ತಮ ಸೇವಾ ಕಾರ್ಯದ ಮೂಲಕ ಜನ ಸೇವೆ ಮಾಡಿದೆ ಎಂದು ಅವರು ಶ್ಲಾಘಿಸಿದರು.
ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯ ಖತೀಬರಾದ ಅಲ್‌ಹಾಜ್ ಇಸಾಕ್ ಬಾಖವಿ ದುವಾಃ ನೆರವೇರಿಸಿದರು. ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್‌ನ ಗೌರವಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಅಲ್ಪ ಸಂಖ್ಯಾತ ಕಾಂಗ್ರೆಸ್‌ನ ಜಿಲ್ಲಾ ಅಧ್ಯಕ್ಷ ಶಾಹುಲ್ ಹಮೀದ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ಸಂಯೋಜಕ ಜಿ.ಕೃಷ್ಣಪ್ಪ, ಮಾಜಿ ಹೆಚ್ಚುವರಿ ಎಡ್ವಕೇಟ್ ಜನರಲ್ ಪೊನ್ನಣ್ಣ, ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಭರತ್ ಮುಂಡೋಡಿ, ಎಂ.ವೆಂಕಪ್ಪ ಗೌಡ, ಅರಂತೋಡು ಗ್ರಾಮ ಪಂಚಾಯತ್ ಸದಸ್ಯ, ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಅರಂತೋಡು ಬದ್ರಿಯಾ ಜುಮಾ‌ ಮಸೀದಿಯ ಅಧ್ಯಕ್ಷ ಅಶ್ರಫ್ ಗುಂಡಿ, ಪ್ರಧಾನ ಕಾರ್ಯದರ್ಶಿ ಮೂಸಾನ್, ನಿವೃತ್ತ ಉಪನ್ಯಾಸಕ ಅಬ್ದುಲ್ಲ ಮಾಸ್ಟರ್ ವೇದಿಕೆಯಲ್ಲಿ
ಉಪಸ್ಥಿತರಿದ್ದರು. ಅನ್ವಾರುಲ್ ಹುಧಾ ಯಂಗ್‌ಮೆನ್ಸ್ ಎಸೋಸಿಯೇಶನ್‌ನ ಸ್ಥಾಪಕ ಅಧ್ಯಕ್ಷರಾದ ಹಾಜಿ ಟಿ.ಎಂ.ಬಾಬ ತೆಕ್ಕಿಲ್, ಸ್ಥಾಪಕ ಕಾರ್ಯದರ್ಶಿ ಹಾಜಿ ಅಹಮ್ಮದ್ ಕುಂಞಿ ಪಟೇಲ್, ಗೌರವಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರನ್ನು ಸನ್ಮಾನಿಸಲಾಯಿತು.
ದ್ಸಿಕೃಸಲಾತ್ ಸಮಿತಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್, ಎಸ್‌ಕೆ‌‌ಎಸ್‌ಎಸ್‌ಎಫ್ ಅಧ್ಯಕ್ಷ ಆಶಿಕ್ ಕುಕ್ಕುಂಬಳ. ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್‌ನ
ಕಾರ್ಯದರ್ಶಿ ಫಸಿಲು ಎ, ಕೋಶಾಧಿಕಾರಿ ಹಾಜಿ ಅಝರುದ್ದೀನ್ ,ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ,ಜವಾದ್,ವಹಾಬ್ ಅಡಿಮರಡ್ಕ,ಮನ್ಸೂರ್ ಪಾರೆಕ್ಕಲ್,ಹನೀಫ್,ಝುಬೈರ್,ತಾಜುದ್ದೀನ್ ಎಸ್ ಅರಂತೋಡು,ಫಯಾಝ್ ಪಟೇಲ್,ಮುಝಮ್ಮಿಲ್,ಮುಜೀಬ್,ಸಮದ್ ಕೊಡಂಕೇರಿ,ನವಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್‌ನ ಅಧ್ಯಕ್ಷ ಎಸ್.ಎಂ.ಅಬ್ದುಲ್ ಮಜೀದ್ ಸ್ವಾಗತಿಸಿದರು. ಎಸೋಸಿಯೇಶನ್‌ನ ಗೌರವಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಹಮ್ಮದ್ ಗಝಾಲಿ ಕೆ.ಬಿ. ಕಾರ್ಯಕ್ರಮ ನಿರೂಪಿಸಿದರು.

Sponsors

Related Articles

Back to top button