ಗೂನಡ್ಕ ಶ್ರೀ ಶಾರದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನೂತನ ಸಮುದಾಯ ಭವನ ಕಟ್ಟಡ ಉದ್ಘಾಟನೆ…

ಸುಳ್ಯ: ದ.ಕ. ಸಂಪಾಜೆ ಗ್ರಾಮದ ಗೂನಡ್ಕ ಶ್ರೀ ಶಾರದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನೂತನ ಸಮುದಾಯ ಭವನವು ಫೆ.14ರಂದು ಸಂಜೆ ಉದ್ಘಾಟನೆಗೊಂಡಿತು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ನೂತನ ಸಮುದಾಯ ಭವನವನ್ನು ಉದ್ಘಾಟಿಸಿ, ನೂತನ ಭೋಜನ ಕೊಠಡಿಗೆ ಶಂಕುಸ್ಥಾಪನೆಗೊಳಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಜಿ.ಪಂ. ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು ಅವರು ಸಭಾಭವನದ ವೇದಿಕೆಯನ್ನು ಉದ್ಘಾಟಿಸಿದರು. ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ, ತಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ, ಕೆ.ವಿ.ಜಿ. ಆಯುರ್ವೇದ ಕಾಲೇಜು ಪ್ರಾಂಶುಪಾಲ ಡಾ. ಡಿ.ವಿ.ಲೀಲಾಧರ್, ಬೀಜದಕಟ್ಟೆ ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಡಾ. ಉಮ್ಮರ್ ಬೀಜದಕಟ್ಟೆ, ದ.ಕ.ಜಿಲ್ಲಾ ಒಕ್ಕಲಿಗ ಸಂಘದ ನಿಯೋಜಿತ ಅಧ್ಯಕ್ಷ ಕೆ. ಲೋಕಯ್ಯ ಗೌಡ, ಗೂನಡ್ಕ ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಷನ್‌ ಅಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ, ಪೆರ್ಲಂಪಾಡಿ ಷಣ್ಮುಗದೇವ ಪ್ರೌಢ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಪಿ. ಮುರಳೀಧರ್, ಕಲ್ಲುಗುಂಡಿ ವರ್ತಕರ ಸಂಘದ ಅಧ್ಯಕ್ಷ ಯು.ಬಿ. ಚಕ್ರಪಾಣಿ, ಶ್ರೀ. ಕ್ಷೇ. ಧ.ಗ್ರಾ.ಯೋಜನೆ ಮೇಲ್ವಿಚಾರಕ ನವೀನ್, ಶಾಲಾ ಸಂಚಾಲಕ ಎಸ್.ಪಿ.ಲೋಕನಾಥ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಜಿ.ರಾಮಚಂದ್ರ, ಶಾಲಾ ಮುಖ್ಯೋಪಾಧ್ಯಾಯ ಹನುಮಂತಪ್ಪ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಅಬೂಬಕ್ಕರ್ ಸಿದ್ದೀಕ್, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯಾನಂದ ಇರ್ಣೆ, ಗೋಪಾಲಕೃಷ್ಣ ಬನ, ಶ್ರೀಮತಿ ಜಯ ದೇವಿದಾಸ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಟ್ಟಡ ಸಮಿತಿ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ, ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ, ಧಾನ್ಯ ಸಹಕಾರ ಸಂಘ , ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ, ಆದಿದ್ರಾವಿಡ ಸಮಾಜ ಸೇವಾ ಸಂಘ, ಗೂನಡ್ಕ ಅಲ್ ಅಮೀನ್ ವೆಲ್ಪೇರ್ ಅಸೋಸಿಯೇಷನ್, ಕೃಷ್ಣ ಗೆಳೆಯರ ಬಳಗ ಸೇರಿದಂತೆ ಹಲವು ಸಂಘ ಸಂಸ್ಥೆಗಳ ವತಿಯಿಂದ ಕರ್ನಾಟಕ ಸರಕಾರದ ನೂತನ ಸಚಿವರಾಗಿ ಆಯ್ಕೆಯಾದ ಎಸ್. ಅಂಗಾರ ಅವರನ್ನು ಸನ್ಮಾನಿಸಲಾಯಿತು.

Sponsors

Related Articles

Leave a Reply

Your email address will not be published. Required fields are marked *

Back to top button