ಸುದ್ದಿ

ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಇಡಿ ಮತ್ತು ಐಟಿ ದಾಳಿ – ಕಾಂಗ್ರೆಸ್ ಮುಖಂಡ ಟಿ.ಎಂ.ಶಹೀದ್ ತೆಕ್ಕಿಲ್ ಖಂಡನೆ…

ಸುಳ್ಯ: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರವರು ಜಾತಿ, ಮತ, ಧರ್ಮ ಬೇಧ ಇಲ್ಲದೆ ಬಡವರಿಗೆ ಸಹಾಯ ಮಾಡಿಕೊಂಡು ಬರುತ್ತಿದ್ದಾರೆ. ಅನೇಕ ಜನರಿಗೆ ತೀರ್ಥಯಾತ್ರೆಗೆ , ಮಕ್ಕಾ ಯಾತ್ರೆಗೆ ತೆರಳಲು ಸಹಾಯ ಮಾಡುತ್ತಿದ್ದು, ಸರಕಾರ ಮಾಡುವುದಕ್ಕಿಂತ ಹೆಚ್ಚಾಗಿ ಜನ ಸೇವೆ ಮಾಡಿಕೊಂಡು ಬಂದಿದ್ದಾರೆ. ಅಲ್ಲದೆ ಶಿಕ್ಷಣ ಕ್ಷೇತ್ರದಲ್ಲಿ, ಆರೋಗ್ಯ ಕ್ಷೇತ್ರದಲ್ಲಿ ಮತ್ತು ಬಡವರಿಗೆ ಮನೆ ನಿರ್ಮಾಣಕ್ಕೆ ಸಹಾಯ ಮಾಡಿದಂತ ಧೀಮಂತ ನಾಯಕರಾಗಿದ್ದಾರೆ. ಇವರ ಮೇಲೆ ಮುಂಚೆಯೂ ತನಿಖೆ ನಡೆಸಿದ್ದು, ಈಗ ಏಕಾಏಕಿ ದಾಳಿ ನಡೆಸಿದ್ದಾರೆ. ಕೊರೋನ ಸಂದರ್ಭದಲ್ಲಿ ಬೆಡ್ ದಂಧೆಯಲ್ಲಿ ಮುಸ್ಲಿಂ ಸಮುದಾಯದವರನ್ನು ಮಾತ್ರ ಆರೋಪ ನಡೆಸಿದ ಸಂಸದ ತೇಜಸ್ವಿಸೂರ್ಯ ಅವರ ಆರೋಪವನ್ನು ಸಾಕ್ಷಿ ಸಮೇತವಾಗಿ ಬಯಲಿಗೆಳೆದಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆದಿದೆ ಹಾಗೂ ಅಲ್ಪಸಂಖ್ಯಾತರ ಮುಖಂಡ ಹಾಗೂ ಕಾಂಗ್ರೆಸ್ ಮುಖಂಡರಾಗಿರುವುದರಿಂದ ಈ ರೀತಿಯಾಗಿ ದಾಳಿ ನಡೆಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಟಿ.ಎಂ.ಶಹೀದ್ ತೆಕ್ಕಿಲ್ ರವರು ಇಡಿ ಮತ್ತು ಐಟಿ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

Related Articles

Back to top button