ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ವೇಟ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಭುವನ್‍ರಾಮ್ ಜಗದೀಶ್ ಭಂಡಾರಿ ಇವರು ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ಭಾರ ಎತ್ತುವ ಸ್ಪರ್ಧೆಯಲ್ಲ್ಲಿ ಚಿನ್ನದ ಪದಕವನ್ನು ಗಳಿಸಿಕೊಂಡಿದ್ದಾರೆ.
ಮೈಸೂರಿನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್‍ರಾಮ್ 73 ಕೆಜಿ ವಿಭಾಗದಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ.
ಇವರು ಪುತ್ತೂರಿನ ಜಗದೀಶ್ ಭಂಡಾರಿ ಹಾಗೂ ನಯನಾ ಭಂಡಾರಿ ಇವರ ಪುತ್ರ.
ಇವರಿಗೆ ಕಾಲೇಜಿನ ದೈಹಿಕಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಭಾರತೀಯ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನ ವಿಶ್ರಾಂತ ಯೋಧ ಹಾಗೂ ರಾಷ್ಟ್ರೀಯ ವೈಟ್‍ಲಿಫ್ಟರ್ ಪುಷ್ಪರಾಜ್ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Sponsors

Related Articles

Back to top button