ಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ- ವಿದ್ಯಾರ್ಥಿಗಳಿಗೆ ಶಾಲಾರಾಂಭ ಮತ್ತು ಕೋವಿಡ್ ಮಾಹಿತಿ…

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಗೆ ಕೋವಿಡ್ ನಿಯಮನುಸಾರ ಶಾಲೆಯನ್ನು ಆರಂಭಿಸಲಾಯಿತು.
ವಿವೇಕಾನಂದ ವಿಧ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕರವರು ಭಾರತ ಮಾತೆಗೆ ಪುಷ್ಪರ್ಚಾನೆಗೈದು, ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ಹಾಗೂ ಸ್ವಚ್ಛತೆಯ ಮಹತ್ವದೊಂದಿಗೆ, 18ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ನೆರೆಹೊರೆಯವರಿಗೆ ಕಡ್ಡಾಯ ವ್ಯಾಕ್ಸಿನೇಷನ್ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಈ ಮೂಲಕ ಪ್ರತಿ ಮನೆಗೂ ಜಾಗೃತಿ ಮೂಡಿಸುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಅಧ್ಯಾಪಕರು ವಿದ್ಯಾರ್ಥಿಗಳಿಗೆ ಆರತಿ, ಅಕ್ಷತೆ ಮಾಡಿ ವಿದ್ಯಾರ್ಥಿಗಳನ್ನು ವಿಶಿಷ್ಟ ರೀತಿಯಲ್ಲಿ ಬರಮಾಡಿಕೊಂಡರು. ನಂತರ ವಿದ್ಯಾರ್ಥಿಗಳ ಕೈಗೆ ಸ್ಯಾನಿಟೈಸರ್ ಹಾಕಿ, ತಾಪಮಾನವನ್ನು ಪರಿಶಿಲೀಸಲಾಯಿತು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದು, ಎಲ್ಲಾ ಅಧ್ಯಾಪಕ ವೃಂದದವರು ಸಹಕರಿಸಿದರು.

Related Articles

Back to top button