ಫೆ.20, 21 – ಬಿ.ಸಿ.ರೋಡಿನಲ್ಲಿ ಕನ್ನಡ ಭವನ ಲೋಕಾರ್ಪಣೆ, ಕನ್ನಡ ಸಾಹಿತ್ಯ ಸಮ್ಮೇಳನ…
ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕನ್ನಡ ಭವನದ ಲೋಕಾರ್ಪಣೆ ಫೆ.20 ಮತ್ತು ತಾಲೂಕು ಸಾಹಿತ್ಯ ಸಮ್ಮೇಳನ ಫೆ.21ರಂದು ಕನ್ನಡ ಭವನದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನ ಸಭಾಂಗಣದಲ್ಲಿ ಜ.13 ರಂದು ಕಸಾಪ ತಾಲೂಕು ಅಧ್ಯಕ್ಷ ಕೆ.ಮೋಹನ ರಾವ್ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭ ಕಸಾಪ ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ, ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗದ ಅಧ್ಯಕ್ಷ ಸುದರ್ಶನ ಜೈನ್, ಕಟ್ಟಡ ಸಮಿತಿ ಅಧ್ಯಕ್ಷ ಕೊಳಕೆ ಗಂಗಾಧರ ಭಟ್, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಕುವೆಂಪು ಭಾಷಾ ಪ್ರಾಧಿಕಾರ ಅಧ್ಯಕ್ಷ ಡಾ.ಅಜಕ್ಕಳ ಗಿರೀಶ ಭಟ್, ತಾಪಂ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಆಲಿ ಪ್ರಮುಖರಾದ ಸರಪಾಡಿ ಅಶೋಕ ಶೆಟ್ಟಿ, ಕಜೆ ರಾಮಚಂದ್ರ ಭಟ್, ಕೈಯೂರು ನಾರಾಯಣ ಭಟ್, ವಿ.ಸು.ಭಟ್, ರಮಾನಂದ ನೂಜಿಪ್ಪಾಡಿ, ಉಮ್ಮರ್ ಮಂಚಿ, ಕೃಷ್ಣ ಶರ್ಮಾ, ಮಹಾಬಲೇಶ್ವರ ಹೆಬ್ಬಾರ, ಶಿವಶಂಕರ್, ಪಲ್ಲವಿ ಕಾರಂತ, ರವೀಂದ್ರ ಕುಕ್ಕಾಜೆ, ಡಿ.ಬಿ.ಅಬ್ದುಲ್ ರಹಿಮಾನ್, ಗೋಪಾಲ ಅಂಚನ್, ರವಿಕುಮಾರ್, ಸುಂದರ ರಾವ್, ಲಕ್ಷ್ಮಣ್ ಉಪಸ್ಥಿತರಿದ್ದರು. ಸಮ್ಮೇಳನದ ಯಶಸ್ಸಿಗಾಗಿ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.