ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್- ಬಂದ್ಗೆ 50ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ…

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸಲು ಒಮ್ಮತದ ನಿರ್ಧಾರ ಕೈಗೊಂಡಿವೆ.
ಕರ್ನಾಟಕ ಬಂದ್ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಒಕ್ಕೂಟದ ಮುಖಂಡರು ಸಭೆ ನಡೆಸಿದ್ದು, ಸಭೆಯಲ್ಲಿ ಡಿಸೆಂಬರ್ 5ರಂದು ಕರ್ನಾಟಕ್ ಬಂದ್ ಮಾಡಲು ತೀರ್ಮಾನ ಕೈಗೊಳ್ಳಲಾಯಿತು.
ಮರಾಠ ಪ್ರಾಧಿಕಾರ ರಚನೆ ಆದೇಶವನ್ನು ವಾಪಸ್ ಪಡೆಯುವಂತೆ ಈ ಹಿಂದೆ ಕನ್ನಡಪರ ಸಂಘಟನೆಗಳು ಸರ್ಕಾರಕ್ಕೆ ನ.27ರವರೆಗೆ ಗಡುವು ನೀಡಿದ್ದವು. ಈ ನಡುವೆಯೇ ಇದೀಗ ಡಿ.5ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.