ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ – ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ…

ಬಂಟ್ವಾಳ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ ಸಜೀಪಮುನ್ನೂರು ಇದರ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ ದೇವಸ್ಥಾನದ ಸಭಾಂಗಣದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಎಂ ಕೃಷ್ಣ ಶಾಮ್ ಅಧ್ಯಕ್ಷತೆಯಲ್ಲಿ ಡಿ.12 ರಂದು ಜರಗಿತು.
ಬಂಟ್ವಾಳ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಯಶವಂತ ದೇರಾಜೆ ಮಾತನಾಡುತ್ತಾ ಶ್ರೀ ಈಶ್ವರಮಂಗಲ ಸದಾಶಿವ ದೇವಸ್ಥಾನ, ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ ಮೂರು ದೇವಸ್ಥಾನಗಳನ್ನು ಸಂಪರ್ಕಿಸುವ ನೂತನ ರಸ್ತೆ ನಿರ್ಮಾಣಕ್ಕೆ ಎಲ್ಲರ ಸಹಕಾರವನ್ನು ಕೋರಿದರು. ಸಭೆ ಇದಕ್ಕೆ ಸರ್ವಾನುಮತದ ಒಪ್ಪಿಗೆ ನೀಡಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎo ಸುಬ್ರಮಣ್ಯ ಭಟ್, ಸ್ವಾಗತ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಸುರೇಶ್ ಪೂಜಾರಿ, ಹರಿಪ್ರಸಾದ್ ಭಂಡಾರಿ, ಸುರೇಶ್ ಬಂಗೇರ, ಚರಣ್ ಮೊದಲಾದವರು ಉಪಸ್ಥಿತರಿದ್ದರು. ಗೀತೇಶ್ ಗಟ್ಟಿ ಕಾರ್ಯಕ್ರಮ ನಿರೂಪಿಸಿದರು.

Sponsors

Related Articles

Back to top button