ಸುದ್ದಿ

ತೆಕ್ಕಿಲ್ ಶಿಕ್ಷಣ ಸಂಸ್ಥೆ ವತಿಯಿಂದ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಗೆ ಅದ್ದೂರಿ ಸ್ವಾಗತ…

ಸುಳ್ಯ: ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ಪ್ರತಿಷ್ಠಾಪಿಸಲಿರುವ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಆ. 29 ರಂದು ಸಂಪಾಜೆ ಗೇಟ್ ಮೂಲಕ ಹಾದು ಬಂದು ಗೂನಡ್ಕ ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯ ಬಳಿ ಬಂದಾಗ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ ಶಾಲಾಭಿವೃದ್ಧಿ ಮಂಡಳಿ , ಶಾಲಾ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಹಾಗೂ ಊರವರು ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಅದ್ದೂರಿಯಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ತಾಲೂಕು ಸ್ವಾಗತ ಸಮಿತಿಯ ಅಧ್ಯಕ್ಷ ಚಂದ್ರ ಕೋಲ್ಚಾರ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನಕರ ಸಣ್ಣಮನೆ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ ಹಮೀದ್ ಗೂನಡ್ಕ, ಗ್ರಾಮ ಪಂಚಾಯತ್ ಸದಸ್ಯ ಅಬುಸಾಲಿ ಗೂನಡ್ಕ, ಕಿರಣ್ ಬುಡ್ಲೆಗುತ್ತು, ಶಾಲಾ ಆಡಳಿತಾಧಿಕಾರಿ ರಹೀಮ್ ಬೀಜದಕಟ್ಟೆ, ಜುರೈದ್ ತೆಕ್ಕಿಲ್ ಪೇರಡ್ಕ, ಉನೈಸ್ ಗೂನಡ್ಕ , ಸಾಧುಮಾನ್ ತೆಕ್ಕಿಲ್, ಶಾಲಾ ಮುಖ್ಯೋಪಾಧ್ಯಾಯಿನಿ ವಾಣಿ, ಶಾಲಾ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಹಾಗು ಊರ ಪ್ರಮುಖರು ಉಪಸ್ಥಿತರಿದ್ದರು.

Related Articles

Back to top button