ಸುಳ್ಯ – ಸೂಟ್ ಕೇಸ್ ನಲ್ಲಿ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿ ವಶ…

ಸುಳ್ಯ: ಸೂಟ್ ಕೇಸ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಕಲ್ಲುಮುಟ್ಲು ನಿವಾಸಿ ನಿಸಾರ್ (30) ಎಂಬಾತನನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಯು ಸುಳ್ಯದ ಗಾಂಧಿನಗರದಿಂದ ಸ್ಕೂಟರ್ ನಲ್ಲಿ ಸೂಟ್ ಕೇಸ್ ಒಂದನ್ನು ಹಿಡಿದುಕೊಂಡು ಹೋಗುತ್ತಿರುವ ಬಗ್ಗೆ ಸಂಶಯ ಗೊಂಡು ಜ್ಯೋತಿ ವೃತ್ತದ ಬಳಿ ಆತನ್ನು ತಡೆದು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಸೂಟ್ ಕೇಸ್ ನಲ್ಲಿ ದನದ ಮಾಂಸ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಆತ ಪೈಚಾರು ಕಡೆಗೆ ಗ್ರಾಹಕರಿಗೆ ನೀಡಲು ಮಾಂಸ ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಸ್ಕೂಟರ್ ಹಾಗೂ 15 ಕೆ.ಜಿ. ಗೋಮಾಂಸವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button