ಕಾರ್ಕಳ ಮತ್ತು ಹೆಬ್ರಿ ಕ್ಷೇತ್ರದ ವಿವಿದೆಡೆ ಕಾಂಗ್ರೆಸ್ ಕಾರ್ಯಕರ್ತರ ಸಭೆ…

ಉಡುಪಿ: ಕಾರ್ಕಳ ಮತ್ತು ಹೆಬ್ರಿ ಕ್ಷೇತ್ರದ ಹೆಬ್ರಿ, ಅಜೆಕಾರು, ಕುಕ್ಕುಂದೂರು, ಬಜಗೋಳಿ ಜಿಲ್ಲಾ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಕ್ಷದಲ್ಲಿ ಸ್ಪರ್ಧಿಸಿದ್ದ ಪ್ರತಿನಿಧಿಗಳು , ಪಕ್ಷದ ಮುಖ್ಯ ಕಾರ್ಯಕರ್ತರು , ನಾಯಕರುಗಳು ಜೊತೆ ಹಮ್ಮಿಕೊಂಡಿದ್ದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭಾಗವಹಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರು ತಾವು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಮಂಜುನಾಥ ಭಂಡಾರಿ ಅವರ ಗಮನ ಸೆಳೆದರು. ಈ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆಯನ್ನು ಮಂಜುನಾಥ ಭಂಡಾರಿ ಅವರು ನೀಡಿದರು.
ಈ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು , ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಶ್ರೀಮತಿ ರೋಶ್ನಿ, ಕಾರ್ಕಳ ಬ್ಲಾಕ್‌ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸದಾಶಿವ ದೇವಾಡಿಗ , ಹೆಬ್ರಿ ಬ್ಲಾಕ್‌ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಂಜುನಾಥ ಪೂಜಾರಿಯವರು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಉಪಾಧ್ಯಕ್ಷರುಗಳಾದ ಸುಧಾಕರ್ ಎನ್ ಕೋಟ್ಯಾನ್ ಮತ್ತು ನೀರೆ ಕೃಷ್ಣ ಶೆಟ್ಟಿ , ಬ್ಲಾಕ್ ಕಾಂಗ್ರೆಸ್ ನಿಕಟ ಪೂರ್ವ ಅಧ್ಯಕ್ಷರಾದ ಎಚ್. ಶೇಖರ ಮಡಿವಾಳ ರವರು ಉಪಸ್ಥಿತರಿದ್ದರು.

Sponsors

Related Articles

Back to top button