ತುಂಬೆ ಡ್ಯಾಂ ಸಂತ್ರಸ್ತ ರೈತರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ – ಉಸ್ತುವಾರಿ ಸಚಿವರ ಭರವಸೆ….
ಬಂಟ್ವಾಳ: ಶಾಸಕರಾದ ಸನ್ಮಾನ್ಯ ರಾಜೇಶ್ ನಾಯ್ಕ್ ಉಳೇಪಾಡಿಗುತ್ತು ಇವರು ಕಳೆದ ಅಧಿವೇಶನದಲ್ಲಿ ತುಂಬೆ ಡ್ಯಾಂ ಸಂತ್ರಸ್ತ ರೈತರಿಗೆ ವರತೆ ಪ್ರದೇಶ ಸೇರಿಸಿ ಮುಳುಗಡೆ ಭೂಮಿಗೆ ನ್ಯಾಯೋಚಿತ ಸೂಕ್ತ ಪರಿಹಾರ ಒದಗಿಸುವಂತೆ ಸರಕಾರವನ್ನು ಆಗ್ರಹಿಸಿದ್ದರು. ಸರಕಾರ ಕೂಡಲೇ ಸ್ಪಂದಿಸಿ ವರತೆ ಪ್ರದೇಶ ಸೇರಿಸಿ ಮುಳುಗಡೆ ಭೂಮಿಗೆ ನ್ಯಾಯೋಚಿತ ಪರಿಹಾರ ಕೊಡುವ ಬಗ್ಗೆ ಸರ್ವೇ ಕಾರ್ಯ ಆರಂಭಿಸುವಂತೆ ಸೂಚಿಸಿದ್ದರೂ ಆ ಕೆಲಸ ಈತನಕ ಆಗದೆ ಇರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ರೈತರ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದಾಗ, ಕೂಡಲೇ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆ ಚರ್ಚಿಸಿ 10 ದಿನದೊಳಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂತ್ರಸ್ತರ ಸಭೆ ಜರುಗಿಸಿ ರೈತರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಆ.14 ರಂದು ಸಚಿವರನ್ನು ಭೇಟಿ ಮಾಡಿದ ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಎಂ ಸುಬ್ರಹ್ಮಣ್ಯ ಭಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.