ಸೋಮವಾರ – ದ.ಕ 146 ,ಉಡುಪಿ 90 , ರಾಜ್ಯದಲ್ಲಿ 4267 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಸೋಮವಾರ) ದ.ಕ ಜಿಲ್ಲೆಯಲ್ಲಿ 132 ,ಉಡುಪಿ ಜಿಲ್ಲೆಯಲ್ಲಿ 90 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ 146 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7353 ಕ್ಕೆ ಏರಿಕೆಯಾಗಿದೆ.ಇಂದು 8 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 228 ಕ್ಕೆ ಏರಿಕೆಯಾಗಿದೆ. ಇಂದು 533 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2910 ಸಕ್ರಿಯ ಪ್ರಕರಣಗಳಿವೆ.

ಉಡುಪಿ ಜಿಲ್ಲೆಯಲ್ಲಿ ಸೋಮವಾರ 90 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6284ಕ್ಕೆ ಏರಿಕೆಯಾಗಿದೆ.ಇಂದು 3 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 63 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4,267 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,82,354ಕ್ಕೆ ಏರಿಕೆಯಾಗಿದೆ. 4,670 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ರಾಜ್ಯದಲ್ಲಿ ಇಂದು ಕೊರೋನಾ ದಿಂದಾಗಿ 114 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 3,312ಕ್ಕೆ ಏರಿಕೆಯಾಗಿದೆ.ಒಟ್ಟಾರೆ 1,82,354 ಕೊರೋನಾ ಪ್ರಕರಣಗಳ ಪೈಕಿ 99,126 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 80,908 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇನ್ನು ರಾಜ್ಯಾದ್ಯಂತ ಸುಮಾರು 678 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 146 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

Sponsors

Related Articles

Leave a Reply

Your email address will not be published. Required fields are marked *

Back to top button