ಸೋಮವಾರ – ದ.ಕ 152 , ಉಡುಪಿ 113 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಸೋಮವಾರ) ದ.ಕ ಜಿಲ್ಲೆಯಲ್ಲಿ 152 , ಉಡುಪಿ 113 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 152 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15078 ಕ್ಕೆ ಏರಿಕೆಯಾಗಿದೆ. ಇಂದು 8 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 409 ಕ್ಕೆ ಏರಿಕೆಯಾಗಿದೆ. ಇಂದು 313 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2915 ಸಕ್ರಿಯ ಪ್ರಕರಣಗಳಿವೆ. 152 ಪ್ರಕರಣಗಳ ಪೈಕಿ 71 ಪ್ರಕರಣಗಳು ಮಂಗಳೂರಿನಿಂದ, 32 ಪ್ರಕರಣಗಳು ಬಂಟ್ವಾಳದಿಂದ, 18 ಪ್ರಕರಣಗಳು ಪುತ್ತೂರಿನಿಂದ, 16 ಪ್ರಕರಣಗಳು ಸುಳ್ಯದಿಂದ , 9 ಪ್ರಕರಣಗಳು ಬೆಳ್ತಂಗಡಿಯಿಂದ ಹಾಗೂ 6 ಪ್ರಕರಣಗಳು ಬೇರೆ ಜಿಲ್ಲೆಯವರದ್ದಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 113 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 12840ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1780 ಸಕ್ರಿಯ ಪ್ರಕರಣಗಳಿವೆ.

ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 134 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

 

Sponsors

Related Articles

Leave a Reply

Your email address will not be published. Required fields are marked *

Back to top button