ಸುದ್ದಿ

ಸೋಮವಾರ – ದ.ಕ 201 , ಉಡುಪಿ 103 ಹಾಗೂ ರಾಜ್ಯದಲ್ಲಿ 5851 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಸೋಮವಾರ) ದ.ಕ ಜಿಲ್ಲೆಯಲ್ಲಿ 201 , ಉಡುಪಿ 103 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 201 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10531 ಕ್ಕೆ ಏರಿಕೆಯಾಗಿದೆ.ಇಂದು 6 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 316 ಕ್ಕೆ ಏರಿಕೆಯಾಗಿದೆ. ಇಂದು 241 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2269 ಸಕ್ರಿಯ ಪ್ರಕರಣಗಳಿವೆ. 201 ಪ್ರಕರಣಗಳ ಪೈಕಿ 144 ಪ್ರಕರಣಗಳು ಮಂಗಳೂರಿನಿಂದ, 22 ಪ್ರಕರಣಗಳು ಬಂಟ್ವಾಳದಿಂದ, 5 ಪ್ರಕರಣಗಳು ಪುತ್ತೂರಿನಿಂದ, 5 ಪ್ರಕರಣಗಳು ಸುಳ್ಯದಿಂದ , 7 ಪ್ರಕರಣಗಳು ಬೆಳ್ತಂಗಡಿಯಿಂದ ಹಾಗೂ 18 ಪ್ರಕರಣಗಳು ಬೇರೆ ಜಿಲ್ಲೆಯವರದ್ದಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 103 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 10229ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2590 ಸಕ್ರಿಯ ಪ್ರಕರಣಗಳಿವೆ. ಇಂದು 156 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಕೊರೊನಾ ಸೋಂಕಿನಿಂದಾಗಿ 5 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 5851 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,83,665ಕ್ಕೇರಿಕೆಯಾಗಿದೆ. 1,97,625 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ಧಾರೆ. 81, 211 ಮಂದಿ ವಿವಿಧ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ರಾಜ್ಯದಲ್ಲಿ ಇಂದು 130 ಮಂದಿ ಕೊರೋನಾ ಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4810ಕ್ಕೆ ಏರಿಕೆಯಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ಇಂದು 118 ಮಂದಿಗೆ ಸೋಂಕು ದೃಢಪಟ್ಟಿದೆ.

Related Articles

Leave a Reply

Your email address will not be published.

Back to top button