ಸೋಮವಾರ – ದ.ಕ 217 ಹಾಗೂ ರಾಜ್ಯದಲ್ಲಿ 6892 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಸೋಮವಾರ) ದ.ಕ ಜಿಲ್ಲೆಯಲ್ಲಿ 217 ಹಾಗೂ ರಾಜ್ಯದಲ್ಲಿ 6892 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 217 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22344 ಕ್ಕೆ ಏರಿಕೆಯಾಗಿದೆ. ಇಂದು 7 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 515 ಮಂದಿ ಬಲಿಯಾಗಿದ್ದಾರೆ.ಇಂದು 190 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 5567 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಇಂದು 6892 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ.ಸೋಂಕಿತರ ಸಂಖ್ಯೆ 5,82,458ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 59 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,641ಕ್ಕೆ ಏರಿಕೆಯಾಗಿದೆ. ಇಂದು 7,509 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,69,750ಕ್ಕೆ ಏರಿಕೆಯಾಗಿದೆ. 1,04,048 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button